ಅವಕಾಶ ಸಿಕ್ಕಾಗ ಸದ್ಬಳಕೆ ಮಾಡಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು: ರಾಕೇಶ್ ಕುಮಾರ್

WhatsApp
Telegram
Facebook
Twitter
LinkedIn

ಬೆಂಗಳೂರು: ಅವಕಾಶ ಸಿಕ್ಕಾಗ ಅದನ್ನು ಸದ್ಬಳಕೆ ಮಾಡಿಕೊಂಡು ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಬೇಕು ಎಂದು ನಿಕಟ ಪೂರ್ವ ಸಮಾಜ ಕಲ್ಯಾಣ ಆಯುಕ್ತ, ನೂತನ ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಕೇಶ್ ಕುಮಾರ್ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ ಅಧಿಕಾರಿಗಳು ಏರ್ಪಡಿಸಿದ್ದ ಬೀಳ್ಕೋಡುಗೆ ಸಮಾರಂಭದಲ್ಲಿ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರ ವಹಿಸಿಕೊಂಡ ಪ್ರಾರಂಭದಲ್ಲಿ ಇದ್ದ  ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲಾಗಿದೆ, ಗಂಗಾ ಕಲ್ಯಾಣ ಇಲಾಖೆಯಲ್ಲಿ ಇದ್ದ ವ್ಯತ್ಯಾಸವನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ. ನಿಗಮಗಳ ಮೂಲಕ ಸಬ್ಸಿಡಿ ವಾಹನಗಳನ್ನು ನೀಡುವ ಯೋಜನೆಯನ್ನು ಸಮರ್ಥವಾಗಿ ಜಾರಿ ತರಲಾಗಿದೆ ಎಂದು ಹೇಳಿದರು.

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಅಗತ್ಯ ಅಂಕಿ ಅಂಶಗಳನ್ನು ಕಲೆ ಹಾಕಿ ನ್ಯಾ.ನಾಗಮೋಹನ್ ದಾಸ್ ಆಯೋಗದ ಸಮಿತಿಗೆ ನೀಡುವಲ್ಲಿ ಉತ್ತಮವಾಗಿ ಕೆಲಸ ಮಾಡಿದ ತೃಪ್ತಿ ನಮ್ಮಗಿದೆ.ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಹಳೇ ಯೋಜನೆಗಳನ್ನು ಕೈ ಬಿಟ್ಟು ಹೊಸ ಯೋಜನೆಗಳನ್ನು ಜಾರಿ ತರಲು ಅವಕಾಶ ಇದೆ ಎಂದರು.

ಹಾಲಿ ನೂತನ ಆಯುಕ್ತರಾದ ಎನ್.ಎನ್.ನಾಗರಾಜ್ ಮಾತನಾಡಿ,ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಸಾಕಷ್ಟು ಅವಕಾಶಗಳಿವೆ, ವಿಶಾಲವಾದ ಇಲಾಖೆಯಾಗಿದೆ, ರಾಕೇಶ್ ಕುಮಾರ್ ಅವರು ಅತ್ಯುತ್ತಮ ವಾಗಿ ಕೆಲಸ ಮಾಡಿದ್ದಾರೆ ಜನರಿಗೆ ನ್ಯಾಯ ಒದಗಿಸವ ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ಇಲಾಖೆಯ ಕಾರ್ಯದರ್ಶಿ ಮೋಹನ್ ರಾಜ್ ಮಾತನಾಡಿ,ರಾಕೇಶ್ ಕುಮಾರ್ ಮತ್ತೆ ಸಮಾಜಕಲ್ಯಾಣ ಇಲಾಖೆಯ ಕಾರ್ಯದರ್ಶಿ ಯಾಗಿ ಬಂದು ಬಡವರ ಏಳಿಗೆಗಾಗಿ ಕಾರ್ಯನಿರ್ವಹಿಸಲಿ ಎಂದು ತಿಳಿಸಿದರು.

ನಾಲ್ಕುವರೆ ವರ್ಷಗಳ ಕಾಲ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದ ರಾಕೇಶ್ ಕುಮಾರ್ ಅವರು ತಾಳ್ಮೆ ಮತ್ತು ಸಹನೆಗೆ ಹೆಸರಾದ ವ್ಯಕ್ತಿಯಾಗಿದ್ದು, ಅವರ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೂವತ್ತು ವರ್ಷಗಳ ಕಾಲ ಆಗದ ಕಾರ್ಯವನ್ನು ಮಾಡಿ ತೋರಿಸಿದ ದಕ್ಷ ಅಧಿಕಾರಿಯಾಗಿದ್ದಾರೆ ಎಂದು ಇಲಾಖೆಯ ವಿವಿಧ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು.

ಲಿಡ್ಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ್, ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ವೆಂಕಟಯ್ಯ, ಕ್ರೈಸ್ ನ ನಿರ್ದೇಶಕ ಶಿವಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ದೇವರಾಜ್, ಬೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಚಂದ್ರನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon