​ಮಾಹಿತಿ ಹಕ್ಕು ಕಾಯ್ದೆಗೆ 21 ವರ್ಷ: ರಾಜ್ಯಮಟ್ಟದ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ

WhatsApp
Telegram
Facebook
Twitter
LinkedIn

ಬೆಂಗಳೂರು: ದೇಶದಲ್ಲಿ ಜನಸಾಮಾನ್ಯರ ಹಕ್ಕುಗಳನ್ನು ಎತ್ತಿಹಿಡಿಯುವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಜಾರಿಗೆ ಬಂದು 21 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸಾಮಾಜಿಕ ಕಾರ್ಯಕರ್ತರ ಒಕ್ಕೂಟದ ವತಿಯಿಂದ ರಾಜಧಾನಿ ಬೆಂಗಳೂರಿನ ಗಾಂಧಿ ಭವನದ ಬಾಪೂ ಸಭಾಂಗಣದಲ್ಲಿ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

​ಕಾರ್ಯಕ್ರಮದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಟಿ.ಹೆಚ್. ಸ್ವಾಮಿ ಅವರು, 2005ರಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದ ನಂತರ ಸಾರ್ವಜನಿಕರಿಗೆ ಅಗತ್ಯ ದಾಖಲೆ ಹಾಗೂ ಮಾಹಿತಿಗಳನ್ನು ಪಡೆಯಲು ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಈ ಮಹತ್ವದ ಕಾಯ್ದೆಯ 21ನೇ ವರ್ಷದ ಸಂಭ್ರಮಾಚರಣೆಯ ಭಾಗವಾಗಿ ಭ್ರಷ್ಟಾಚಾರದ ವಿರುದ್ಧ ಧೈರ್ಯದಿಂದ ಹೋರಾಡಿದವರು, ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿದ ಪತ್ರಕರ್ತರು, ಪರಿಸರ ಪ್ರೇಮಿಗಳು ಹಾಗೂ ಸಮಾಜಸೇವಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ವಿವರಿಸಿದರು.

ಈ ರಾಜ್ಯಮಟ್ಟದ ಸಮಾರಂಭದಲ್ಲಿ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಕಲಬುರಗಿ, ಸಿಂಧನೂರು ಮತ್ತು ಚಿತ್ರದುರ್ಗ ಸೇರಿದಂತೆ ರಾಜ್ಯದ ಮೂಲೆಮೂಲೆಗಳಿಂದ ನೂರಾರು ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಹಾಗೂ ಪತ್ರಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭವಿಷ್ಯದಲ್ಲಿಯೂ ಒಕ್ಕೂಟದ ವತಿಯಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ವಿಸ್ತರಿಸಿ, ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

​ಈ ವೇಳೆ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಲಿಂಗೇಗೌಡ ಡಿ.ಎಸ್‌., ರಾಜ್ಯ ಉಪಾಧ್ಯಕ್ಷ ಧನಂಜಯ ಎಂ.ಆರ್ ಸೇರಿದಂತೆ ಅನೇಕ ಗಣ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon