ರೇಬಿಸ್ ನಿರ್ಮೂಲನೆಯ ಗುರಿ ಸಾಧಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಿದೆ: ಸಿ.ಪುಟ್ಟರಂಗಶೆಟ್ಟಿ

WhatsApp
Telegram
Facebook
Twitter
LinkedIn

ಬೆಂಗಳೂರು: ನಾಯಿಗಳಲ್ಲಿ ರೇಬಿಸ್ ನಿಯಂತ್ರಣಕ್ಕೆ ಸಾಮೂಹಿಕ ಲಸಿಕೆ ಹಾಗೂ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವ ಮೂಲಕ 2030ರ ವೇಳೆಗೆ ಮುನುಷ್ಯರಿಗೆ ಹರಡುವ ರೇಬಿಸ್ ನಿರ್ಮೂಲನೆ ಮಾಡುವ ಗುರಿ ಸಾಧಿಸಲು ಸರ್ಕಾರದ ಇಲಾಖೆಗಳು, ವಿಜ್ಞಾನ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಕರೆ ನೀಡಿದರು.

ಸೋಮವಾರ ಭಾರತೀಯ ವಿಜ್ಞಾನ ಸಂಸ್ಥೆ, ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ವತಿಯಿಂದ ನಗರದ ಐಐಎಸ್‌ಸಿಯ ಎ.ವಿ. ರಾಮಾರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ರೇಬಿಸ್ ದಿನ-2026ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಲಕ್ಷಾಂತರ ನಾಯಿಗಳಿಗೆ ಉಚಿತ ಲಸಿಕೆ ನೀಡುವುದರ ಜೊತೆಗೆ ರಾಜ್ಯ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್‌ನಲ್ಲಿ ರೇಬಿಸ್ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

2024-25ನೇ ಸಾಲಿನಲ್ಲಿ 22,064 ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ, ಸುಮಾರು 6.62 ಲಕ್ಷ ನಾಯಿಗಳಿಗೆ ಸಹ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಗಿದೆ. 2025-26ನೇ ಸಾಲಿನಲ್ಲಿ 90,371 ಶಾಲಾ ಮತ್ತು ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, 90,51,599 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಗಿದೆ. ರೇಬಿಸ್ ನಿರ್ಮೂಲನೆಗೆ ನಾಯಿಗಳಿಗೆ ಸಾಮೂಹಿಕವಾಗಿ ಲಸಿಕೆ ಹಾಕಿಸುವುದು, ನಾಯಿ ಕಡಿತಕ್ಕೆ ಒಳಗಾದವರಿಗೆ ತಕ್ಷಣ ವೈದ್ಯಕೀಯ ನೆರವು ದೊರಕಿಸುವುದು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮೊದಲ ಆದ್ಯತೆಯಾಗಿದೆ ಎಂದರು.

ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಮಾತನಾಡಿ, ಜಗತ್ತಿನಲ್ಲಿ ಪ್ರತಿ ವರ್ಷ ಸುಮಾರು 59 ಸಾವಿರ ಮಂದಿ ರೇಬಿಸ್‌ನಿಂದ ಮೃತಪಟ್ಟಿದ್ದು, ರೋಗದ ನಿರ್ಮೂಲನೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ರೋಗನಿರ್ಣಯ, ನಿಯಂತ್ರಣ ಮತ್ತು ಲಸಿಕೆ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದರು.

ಜಾಗತಿಕವಾಗಿ ರೇಬಿಸ್ ಹರಡುವಿಕೆಯಲ್ಲಿ ನಾಯಿಗಳ ಕಡಿತ ಪ್ರಮುಖ ಪಾತ್ರ ವಹಿಸುತ್ತಿದ್ದು, ಶೇ.98ರಷ್ಟು ಪ್ರಕರಣಗಳು ನಾಯಿ ಕಡಿತಕ್ಕೆ ಸಂಬಂಧಿಸಿದ್ದಾಗಿವೆ. ಭಾರತವು ಜಾಗತಿಕ ರೇಬಿಸ್ ಸಾವುಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಪಾಲು ಹೊಂದಿದೆ. ಹೀಗಾಗಿ ರೇಬಿಸ್ ನಿರ್ಮೂಲನೆಗೆ ರಾಷ್ಟ್ರೀಯ ಕಾರ್ಯಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ವಿನೋತ್‌ಪ್ರಿಯಾ, ಆಯುಕ್ತ ಲಿಂಗರಾಜ ಎಸ್.ಎಸ್, ಭಾರತೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ. ಉತ್ಪಾಲ್ ಎಸ್. ಟಾಟು, ಪಶುವೈದ್ಯಕೀಯ ಮಹಾವಿದ್ಯಾಲಯದ ಶ್ರೀಕೃಷ್ಟ ಇಸ್ಲೂರ್, ಕೃಷ್ಣಮೂರ್ತಿ ಇದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon