ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ವೆಬ್‌ಸೈಟ್‌ ಲೋಕಾರ್ಪಣೆ

WhatsApp
Telegram
Facebook
Twitter
LinkedIn

ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ನಿಗಮದ ವೆಬ್‌ಸೈಟ್‌ ಅನ್ನು ಗುರುವಾರ ಲೋಕಾರ್ಪಣೆಗೊಳಿಸಲಾಗಿದೆ. ಇದರಿಂದ ನಿಗಮದ ಚುಟವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವೇದಿಕೆ ದೊರೆತಂತಾಗಿದೆ.

ವಸಂತನಗರದಲ್ಲಿರುವ ದೇವರಾಜ ಅರಸು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ವೆಬ್‌ಸೈಟ್‌ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಸಮುದಾಯದ ಜನರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ನೂತನ ವೆಬ್‌ಸೈಟ್‌ ಆರಂಭಿಸಲಾಗಿದೆ. ಇನ್ನು ಮುಂದೆ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮ ಹಾಗೂ ಸೌಲಭ್ಯಗಳ ಮಾಹಿತಿ ಈ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಸಮುದಾಯದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ನಿಗಮಕ್ಕೆ ಅಗತ್ಯ ಅನುದಾನ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುವೆ. ಶ್ರೀ ನಾರಾಯಣ ಗುರುಗಳ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ನಾರಾಯಣ ಗುರುಗಳ ಚಿಂತನೆ ಹಾಗೂ ಆದರ್ಶಗಳನ್ನು ಸಾಕಾರಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಮಾತನಾಡಿ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ವೆಬ್‌ಸೈಟ್‌ ಮೂಲಕ ಸರ್ಕಾರದ ಯೋಜನೆಗಳು, ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮಾಹಿತಿ ಲಭ್ಯವಾಗಲಿದೆ. ಸಮುದಾಯದ ಜನರು ವೆಬ್‌ಸೈಟ್‌ ಬಳಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮಾತನಾಡಿ, ಸಚಿವ ಮಧು ಬಂಗಾರಪ್ಪ ಹಾಗೂ ಸಚಿವ ಯು.ಟಿ. ಖಾದರ್ ಅವರು ನೂತನ ವೆಬ್‌ಸೈಟ್‌ಗೆ ಚಾಲನೆ ನೀಡಿದ್ದಾರೆ. 26 ಪಂಗಡಗಳನ್ನು ಒಳಗೊಂಡಿರುವ ನಾರಾಯಣ ಗುರು ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳು ಹಾಗೂ ಸರ್ಕಾರದ ಯೋಜನೆಗಳ ಸಂಪೂರ್ಣ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಇನ್ನು ನಿಗಮದ ಕಾರ್ಯಗಳಿಗ ಮಧು ಬಂಗಾರಪ್ಪ ಅವರು ಸದಾ ಬೆಂಬಲವಾಗಿ ನಿಂತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಹಿಂದುಳಿದ ವರ್ಗಗಳ ಯುವ ಮುಖಂಡ ರವಿ ಬೋಸರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon