ಬೆಂಗಳೂರು: ಶ್ರೀ ಸಾಯಿ ಫಿಲ್ಮ್ ಅಕಾಡೆಮಿ ವತಿಯಿಂದ ನಗರದ ಪ್ರೆಸ್ ಕ್ಲಬ್‌ನಲ್ಲಿ ನೀವೇ ಹೆಸರಿಡಿ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಶ್ರೀ ಸಾಯಿ ಫಿಲ್ಮ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ನಟಿ ಕವನ, ನಟಿ ಫಲಕ್, ನಟ ರಕ್ಷಿತ್, ನಟ ಹಾಗೂ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ಅವರುಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಚಿತ್ರರಂಗದ ಕಲಾವಿದರಾದ ನಾಗೇಶಮಯ್ಯ, ನಟಿಯರಾದ ಪುಷ್ಪ ಸ್ವಾಮಿ, ಆಡುಗೋಡಿ ಶ್ರೀನಿವಾಸ್, ನಟ ಶಿವಮೊಗ್ಗ ಭಾಸ್ಕರ್, ಸುಲೋಚನಾ ರೈ, ಮಾಲಾ, ಸುರೇಶ್ ಬಾಬು ಸೇರಿದಂತೆ ಹಲವು ಗಣ್ಯರು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಈ ವೇಳೆ ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ಚಿತ್ರದ ಛಾಯಾಗ್ರಹಣವನ್ನು ಮುತ್ತುರಾಜ್ ನಿರ್ವಹಿಸಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ವಿಜಯ್ ಜಗ್ಗಿ ರಚಿಸಿದ್ದಾರೆ. ಇನ್ನು ಸಿನಿಮಾ ಕ್ಷೇತ್ರಕ್ಕೆ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಹಾಗೂ ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶ್ರೀ ಸಾಯಿ ಫಿಲ್ಮ್ ಅಕಾಡೆಮಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ನೀವೇ ಹೆಸರಿಡಿ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರರಂಗದ ಹಲವು ಕಲಾವಿದರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.














