ಬೆಳಗಾವಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ನಾಳೆ ಚಾಲನೆ

WhatsApp
Telegram
Facebook
Twitter
LinkedIn

ಬೆಳಗಾವಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 2025 -26 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ .16 ಮತ್ತು 17ರಂದು ನಡೆಯಲಿವೆ.

ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಜ. 16ರ ಬೆಳಗ್ಗೆ  ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಡೆಸಿಕೊಡಲಿದ್ದಾರೆ. ಕ್ರೀಡಾ ಜ್ಯೋತಿಯನ್ನು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸ್ವೀಕರಿಸಲಿದ್ದಾರೆ.  ಧ್ವಜಾರೋಹಣವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೆರವೇರಿಸಲಿದ್ದಾರೆ.

ವೇದಿಕೆಯಲ್ಲಿ ಬೆಳಗಾವಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ತಾನಾಜಿ ರಾಯವ್ವಗೋಳ, ಉಪಾಧ್ಯಕ್ಷ ಬಿ.ಎ ಕುಂಬಾರ ಉಪಸ್ಥಿತರಿರಲಿದ್ದಾರೆ.

 

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon