ಕಲಬುರಗಿ: ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಲಂಚದ ಹಣದ ಸಮೇತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಜಿಲ್ಲೆಯ ಕಮಲಾಪುರ ತಹಶಿಲ್ದಾರ್ ಕಚೇರಿಯ ಎಫ್.ಡಿ.ಎ ಶಶಿಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರಾಗಿದ್ದಾರೆ.
ಜಮೀನು ದಾಖಲೆ ನೀಡುವುದಕ್ಕೆ ಶಶಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಿಶನ್ ರಾಠೋಡ್ ಎಂಬುವವರ ಬಳಿ ಲಂಚದ ಹಣ ಕೇಳಿದ್ದರು. 10 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಕಲಬುರಗಿಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ.















