ಬೆಳಗಾವಿಯಲ್ಲಿ ಭರ್ಜರಿ ಪೊಲೀಸ್ ಕಾರ್ಯಾಚರಣೆ

WhatsApp
Telegram
Facebook
Twitter
LinkedIn

ಬೆಳಗಾವಿ: ನಗರದಲ್ಲಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರಿಗೆ ಎಪಿಎಂಸಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿರುವ ವಿಶೇಷ ತಂಡ, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಳಗಾವಿಯ ಕಂಗ್ರಾಳಿ ಕೆ.ಎಚ್ ನಿವಾಸಿ ದೀಪಕ್ ಭಾಗಾನಗರ ಎಂಬುವವರ ಹಿರೋ ಸ್ಪೆಂಡರ್ ಬೈಕ್ ಕಳ್ಳತನವಾದ ಬಗ್ಗೆ ಫೆಬ್ರವರಿ 10ರಂದು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಗಾಂಭೀರ್ಯ ಅರಿತ ಪೊಲೀಸ್ ಆಯುಕ್ತರಾದ ಬೊರಸೆ ಭೂಷನ್ ಗುಲಾಬರಾವ್ ಅವರ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್ ಯು.ಎಸ್. ಅವಟಿ ನೇತೃತ್ವದ ವಿಶೇಷ ತಂಡ ತನಿಖೆ ಕೈಗೊಂಡಿತ್ತು. ಈ ಕಾರ್ಯಾಚರಣೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ಉಮೇಶ ಬಾಗೇವಾಡಿ (33) ಹಾಗೂ ಗುಡಸ ಗ್ರಾಮದ ಮೌಲಾ ಹಸನಸಾಬ ಹಲಕರ್ಣಿ (48) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಸುಮಾರು 5,35,000/- ರೂಪಾಯಿ ಮೌಲ್ಯದ ಒಟ್ಟು 13 ಮೋಟಾರ್ ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ 11 ಹಿರೋ ಸ್ಪೆಂಡರ್ ಹಾಗೂ 2 ಹಿರೋ ಎಚ್‌ಎಫ್ ಡಿಲಕ್ಸ್ ಬೈಕ್‌ಗಳು ಸೇರಿವೆ. ಆರೋಪಿಗಳ ಪತ್ತೆಯಲ್ಲಿ ಮಹತ್ವದ ಪಾತ್ರ ವಹಿಸಿದ ಪಿಎಸ್‌ಐ ಎಸ್.ಆರ್. ಮುತ್ತತ್ತಿ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯು ನಗರದಲ್ಲಿ ಬೈಕ್ ಕಳ್ಳತನದ ಜಾಲಕ್ಕೆ ದೊಡ್ಡ ಪೆಟ್ಟು ನೀಡಿದಂತಾಗಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon