ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಸಂತೋಷದಾಯಕ: ಡಿ.ಕೆ. ಶಿವಕುಮಾರ್

WhatsApp
Telegram
Facebook
Twitter
LinkedIn

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ ಎನ್ನುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಳ ಸಂತೋಷ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಈ ವೇಳೆ ಸಿಎಂ ಅವರ ಲೇಖನ ಹಾಗೂ ಟ್ವಿಟರ್ ಪೋಸ್ಟ್ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಬಾಗಲಕೋಟೆ ಗಲಭೆ ಬಗ್ಗೆ ಪ್ರತಿಕ್ರಿಯಿಸಿ, ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು, ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ ಎಂದರು.

ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ನಾನು ಒಂದು ರೂ. ಅನುದಾನ ಕೇಳಿಲ್ಲ ಎಂಬ ಶಾಸಕ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ಬಗ್ಗೆ ಮುಂದೆ ಮಾತನಾಡೋಣ ಎಂದು ತಿಳಿಸಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon