ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯು ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಪರೀಕ್ಷೆಗಳಿಗೆ 1,802 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಪರೀಕ್ಷೆಗೆ 77,184 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 75,382 ವಿದ್ಯಾರ್ಥಿಗಳು (ಶೇ.97.67 ) ಪರೀಕ್ಷೆಗೆ ಹಾಜರಾಗಿದ್ದಾರೆ. ಮೈಸೂರಿನಲ್ಲಿ ಗರಿಷ್ಠ 265. ವಿದ್ಯಾರ್ಥಿಗಳು ಗೈರಾಗಿದ್ದು, ಹಾವೇರಿ ಜಿಲ್ಲೆಯಲ್ಲಿ 231, ಬೆಂಗಳೂರು ದಕ್ಷಿಣ 144, ಧಾರವಾಡ 126, ಬೆಂಗಳೂರು ಉತ್ತರ 123 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕನಿಷ್ಠ ತಲಾ ಒಂದು ವಿದ್ಯಾರ್ಥಿಗಳು ಗೈರಾಗಿದ್ದು, ಚಿಕ್ಕಬಳ್ಳಾಪುರ ಶೇ.97.87 ಮತ್ತು ಚಿತ್ರದುರ್ಗ ಶೇ. 99.64 ಹಾಜರಾತಿ ದಾಖಲಾಗಿದೆ.















