ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

ಬೆಂಗಳೂರು: ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18 ರಿಂದ 40 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ ವರೆಗೆ ವೇತನ ಇರಲಿದೆ. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ವಿಜ್ಞಾನ, ಕಲೆ, ವಾಣಿಜ್ಯ, ಬಿಬಿಎ, ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon