ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.
ಅಬ್ದುಲ್ ಜಬ್ಬಾರ್ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.















