ಬೆಂಗಳೂರು: ಶಿವಮೊಗ್ಗದ ತುಂಗಾ ನದಿ ತೀರದಲ್ಲಿ 2022ರಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.
ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2023ರಲ್ಲಿ ಕೀನ್ಯಾದ ನೈರೊಬಿಯಾದಿಂದ ದೆಹಲಿಗೆ ಬಂದಾ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ವೇಳೆ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿರುವ ಕುರಿತು ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆಯನ್ನು ಆತ ನೀಡಿದ್ದ.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ಕೆಂಪರಾಜು ಅವರು ಅಪರಾಧಿಗೆ 6 ವರ್ಷ ಸಜೆ ಹಾಗೂ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.















