ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಂಗಳವಾರ ನಾಡಪ್ರಭು ಕೆಂಪೇಗೌಡ ಬಡಾವಣೆಯ ಬ್ಲಾಕ್-2ರಲ್ಲಿ ಸುಮಾರು 43 ಕೋಟಿ ರೂಪಾಯಿಗಳ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಮಂಗನಹಳ್ಳಿ ಗ್ರಾಮದ ಸರ್ವೆ ನಂ. 22/2 ರಲ್ಲಿ 2 ಎಕರೆ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಗಳನ್ನು ತೆರವುಗೊಳಿಸಿ ಆಸ್ತಿಯನ್ನು ಪ್ರಾಧಿಕಾರವು ವಶಕ್ಕೆ ಪಡೆದಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನೊಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಗಿದೆ.















