ಜಿಬಿಎ ಚುನಾವಣೆ ಆಗಸ್ಟ್ 31ರೊಳಗೆ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್

WhatsApp
Telegram
Facebook
Twitter
LinkedIn

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯನ್ನು 2026ರ ಆಗಸ್ಟ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಗಡುವು ವಿಧಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದ್ದು, ಇದುವೇ ಅಂತಿಮ ಅವಕಾಶ ಎಂದು ಖಡಕ್ ಸೂಚನೆ ನೀಡಿದೆ.

ಆದೇಶದ ಅನ್ವಯ ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸಲು ನೀಡಿದ್ದ ಜನವರಿ 12ರ ಆದೇಶವನ್ನು ಮಾರ್ಪಡಿಸಲಾಗಿದೆ. ಇದೀಗ ಆಗಸ್ಟ್ 31 ಅನ್ನು ಅಂತಿಮ ಗಡುವಾಗಿ ನಿಗದಿಪಡಿಸಲಾಗಿದೆ.

ಮನವಿ ತಿರಸ್ಕೃತ:

ಮುಂಬರುವ ಜನಗಣತಿ, ಮಳೆಗಾಲದ ಸಿದ್ಧತೆಗಳು ಹಾಗೂ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯಗಳು ಬಾಕಿ ಇರುವುದರಿಂದ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon