ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದಿಂದ ಸಮಗ್ರ ಅಭಿವೃದ್ಧಿಗೆ ನಾಂದಿ: ಸಿಎಂ ಸಿದ್ದರಾಮಯ್ಯ‌

WhatsApp
Telegram
Facebook
Twitter
LinkedIn

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌  ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ ನಮ್ಮ ಮನೆ ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ  ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು ಕೆ.ಹೆಚ್.ಬಿ ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ. ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಲಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ಚಾಗುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ ಕರ್ನಾಟಕ ಗೃಹ ಮಂಡಳಿ ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಉಲ್ಲೇಖಿಸಿದರು.

ಖಾಲಿ ಇರುವ ನಿವೇಶನಗಳ ಮಾರಾಟದಿಂದ ಕೆ.ಹೆಚ್.ಬಿ ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕೆ.ಹೆಚ್.ಬಿ  ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ. ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆ.ಹೆಚ್.ಬಿ ಅಧ್ಯಕ್ಷ ಹಾಗೂ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, ಪರಿಷತ್ ಸದಸ್ಯ ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon