ಉಪ್ಪಾರ ಸಮಾಜದ ಏಕೈಕ ಶಾಸಕ ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್

WhatsApp
Telegram
Facebook
Twitter
LinkedIn

ಬೆಂಗಳೂರು: ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಎನ್ ಒತ್ತಾಯಿಸಿದರು.

ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಆಯ್ಕೆಯಾಗಿರುವ ಹಿರಿಯ ಜನನಾಯಕ ಹಾಗೂ ಮುಖಂಡ ಪುಟ್ಟರಂಗಶೆಟ್ಟಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗದ ಪ್ರಮುಖ ಸಮುದಾಯವಾದ ಉಪ್ಪಾರ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಅವರು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಕೂಡ ಆಗಿದ್ದು, ಇದನ್ನು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಪುಟ್ಟರಂಗಶೆಟ್ಟಿ ದೀರ್ಘಕಾಲದಿಂದ ಜನಸೇವೆ, ಪಕ್ಷ ಸಂಘಟನೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಜನರಿಂದ ಆಶೀರ್ವಾದ ಪಡೆದಿರುವುದು ಅವರ ಅಪಾರ ಜನಸೇವೆಗೆ ಮತ್ತು ಜನಪ್ರಿಯತೆಗೆ ಸಾಕ್ಷಿಯಾಗಿದೆ. ಇಡೀ ಹಿಂದುಳಿದ ವರ್ಗದ ನಾಯಕರಾಗಿ ಸಮಾಜದ ಪರವಾಗಿ ಸದಾ ಧ್ವನಿಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಸಾಮಾಜಿಕ ನ್ಯಾಯ ಹಾಗೂ ಸಮಾನ ಪ್ರಾತಿನಿಧಿತ್ವಕ್ಕೆ ಬಲ ಸಿಗಲಿದೆ ಎಂದು ಹೇಳಿದರು.

ಸಾಮಾನ್ಯ ಕ್ಷೇತ್ರದಲ್ಲಿ ಪ್ರಬಲ ನಾಯಕರ ಮುಂದೆ ನಿಂತು ಚುನಾವಣೆಗೆ ನಿಂತು ಸಾಕಷ್ಟು ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಉಪ್ಪಾರ ಸಮಾಜ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರೆಯಲು ವೇದಿಕೆ ಕಲ್ಪಿಸಿದಂತೆ ಆಗುತ್ತದೆ. ನಮ್ಮ ಸಮಾಜದವನ್ನು ಪರಿಶಿಷ್ಟ ವರ್ಗ ಮತ್ತು ಪಂಗಡಗಳ ಮೀಸಲಾತಿಯ ಅಡಿಯಲ್ಲಿ ಪರಿಗಣಿಸಬೇಕು ಎನ್ನುವ ಬೇಡಿಕೆ ಸಹ ಇದ್ದು,ಆದ್ದರಿಂದ ಇಡೀ ಹಿಂದುಳಿದ ವರ್ಗಕ್ಕೆ ನ್ಯಾಯ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಿಸಿದರು.

ರಾಜ್ಯದಲ್ಲಿ ಸುಮಾರು 25 ಲಕ್ಷದಷ್ಟು ಜನಸಂಖ್ಯೆ ಉಪ್ಪಾರ ಸಮಾಜದ್ದಾಗಿದ್ದು, ಕೂಲಿ ಆಳುಗಳಾಗಿ, ಮನೆ ಕಟ್ಟುವ ಕಾರ್ಮಿಕರಾಗಿ, ಬೀದಿ ಬದಿ ವ್ಯಾಪಾರಿಗಳಾಗಿ ಅತಿ ಸಂಕಷ್ಟದ ಜೀವನವನ್ನು ಸಾಗಿಸುತ್ತಿದ್ದಾರೆ. ಎಸ್.ಎಸ್.ಎಲ್.ಸಿ ತನಕ ಓದುದವರು ಸಹ ಕಡಿಮೆಯಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಅಂತೂ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವವರು ಹೆಚ್ಚಾಗಿದ್ದಾರೆ ಇಂತಹ ಅತೀ ಹಿಂದುಳಿದ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದರೆ ಇಡೀ ಸಮಾಜದ ಸುಸ್ಥಿಗೆ ಮುನ್ನುಡಿ ಬರೆದಂತಾಗುತ್ತದೆ ಎಂದು ಸುನೀಲ್ ಕುಮಾರ್ ಎನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯ ಖಜಾಂಚಿ ಮಹಾದೇವ್, ಮಹಿಳಾ ಮುಖಂಡರಾದ ಡಾ ಗೀತಾ ಸೈದಾಪುರ ಉಪಸ್ಥಿತರಿದ್ದರು.

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon