ಖಾನಾಪುರ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಸದ ರಾಶಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖ ರಸ್ತೆಯಲ್ಲೇ ಕಸ ಬಿದ್ದಿರುವುದರಿಂದ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಹದಗೆಟ್ಟಿದ್ದು, ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಕಸವನ್ನು ಸಮಯಕ್ಕೆ ಸರಿಯಾಗಿ ತೆರವುಗೊಳಿಸದ ಕಾರಣ ಮಲೇರಿಯಾ, ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಇದೇ ರಸ್ತೆಯಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂಚರಿಸುತ್ತಿದ್ದು, ಸಾರ್ವಜನಿಕರಿಗೂ ಸಾಕಷ್ಟು ತೊಂದರೆಗೆ ಒಳಗಾಗುತ್ತಿದ್ದಾರೆ.
ಇದೇ ರಸ್ತೆಯಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂಚರಿಸುತ್ತಿದ್ದು, ಸಾರ್ವಜನಿಕರಿಗೂ ಸಾಕಷ್ಟು ತೊಂದರೆಯಾಗುತ್ತಿದೆ. ಸ್ಥಳೀಯರು ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ಕಸದ ರಾಶಿಯನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿದ್ದಾರೆ. ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಖ್ಯ ರಸ್ತೆಯಲ್ಲಿನ ಕಸವನ್ನು ತಕ್ಷಣ ತೆರವುಗೊಳಿಸಬೇಕು. ಪ್ರತಿದಿನ ನಿಯಮಿತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕಾಗಿ ಔಷಧ ಸಿಂಪಡಣೆ ಮಾಡಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಾಶ್ವತ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಒತ್ತಾಯಿಸಿದ್ದಾರೆ.















