ರಾಮಯ್ಯ ಆಸ್ಪತ್ರೆಯಿಂದ 1300 ಮಂದಿಗೆ ಹೃದಯ ಆರೋಗ್ಯ ಜಾಗೃತಿ ಕಾರ್ಯಕ್ರಮ

WhatsApp
Telegram
Facebook
Twitter
LinkedIn

ಬೆಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್ ಡೋಂಟ್ ಮಿಸ್ ಎ ಬೀಟ್ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಸಮುದಾಯ ಫಿಟ್ನೆಸ್ ಉತ್ಸವ ಕಾರ್ಯಕ್ರಮವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಮದನ್ ಎಸ್. ಗಾಯಕ್ವಾಡ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 1300 ಕ್ಕೂ ಹೆಚ್ಚು ಜನರು ಏರೋಬಿಕ್ಸ್, ಝುಂಬಾ ಹಾಗೂ ತೈಚಿ ಸೇರಿದಂತೆ ವಿವಿಧ ವ್ಯಾಯಾಮ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಈ ವೇಳೆ ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯ ಮೂಲಕ ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಆಸ್ಪತ್ರೆಯ ಹೃದಯ ತಜ್ಞರು ಹೃದಯದ ಆರೋಗ್ಯದ ಕುರಿತು ಮಾಹಿತಿ ನೀಡುವುದರ ಜತೆಗೆ, ಹೃದಯ ಸಮಾಧಿತ ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸಲು ಅಗತ್ಯವಾದ ಸಿಪಿಆರ್ ತರಬೇತಿಯನ್ನೂ ಈ ಸಂದರ್ಭದಲ್ಲಿ ನೀಡಲಾಯಿತು. ಹೃದಯ ಸ್ನೇಹಿ ಆಹಾರ ಪದ್ಧತಿಯ ಮಹತ್ವ ತಿಳಿಸಲು ಆರೋಗ್ಯಕರ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಹೃದಯ ಕಾಯಿಲೆಗಳ ತಡೆಗಟ್ಟುವಿಕೆ, ಆರೋಗ್ಯಕರ ಜೀವನಶೈಲಿ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಡಾ. ಮದನ್ ಎಸ್. ಗಾಯಕ್ವಾಡ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, 2004ರಲ್ಲಿ ಸ್ಥಾಪನೆಯಾದ ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್ 500 ಹಾಸಿಗೆಗಳ ಬಹುಶಿಸ್ತೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಜೂನ್ 2025ರಲ್ಲಿ ಜೆಸಿಐ ಮಾನ್ಯತೆ ಪಡೆದಿದೆ. ಹೃದಯ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಚಿಕಿತ್ಸೆ ಒದಗಿಸುತ್ತಿದೆ. ಆಸ್ಪತ್ರೆಯು ಈವರೆಗೆ 50 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಿದ್ದು, ಎರಡು ಲಕ್ಷಕ್ಕೂ ಅಧಿಕ ಶಸ್ತ್ರಚಿಕಿತ್ಸೆಗಳನ್ನು ನಡೆಸಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ನಟಿಯರಾದ ಶಾನ್ವಿ ಶ್ರೀವಾಸ್ತವ ಮತ್ತು ಕಾವ್ಯಾ ಶೆಟ್ಟಿ ಮಾತನಾಡಿ, ಜನರು ತಮ್ಮ ದೈನಂದಿನ ಜೀವನದಲ್ಲಿ ಫಿಟ್ನೆಸ್ ಮತ್ತು ಹೃದಯ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon