ಹಿಂದುಳಿದ ವರ್ಗಗಳ ಪ್ರತ್ಯೇಕ ಇಲಾಖೆ/ ಸಚಿವಾಲಯದ ಸ್ಥಾಪನೆಗೆ ಕೇಂದ್ರಕ್ಕೆ ಒತ್ತಾಯ

WhatsApp
Telegram
Facebook
Twitter
LinkedIn

ಬೆಂಗಳೂರು: ಕೇಂದ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಪ್ರತ್ಯೇಕ ಇಲಾಖೆ/ಸಚಿವಾಲಯ ಸ್ಥಾಪಿಸಿ, ದೇಶದ ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಒದಗಿಸಬೇಕು ಎಂದು ಒಬಿಸಿ ಫೆಡರೇಶನ್ ಆಪ್ ಇಂಡಿಯಾ ಆಗ್ರಹಿಸಿದೆ.

ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಎಂಜೆರಪ್ಪ ಮಾತನಾಡಿ, ಕೇಂದ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಪ್ರತ್ಯೇಕ ಇಲಾಖೆ ಸಚಿವಾಲಯ ತಕ್ಷಣ ರಚಿಸಬೇಕು. ಒಬಿಸಿ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು, ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು ದೇಶದಲ್ಲಿ ಶೇ. 56% ಇರುವ ಒಬಿಸಿ ಸಮುದಾಯಕ್ಕೆ ಕೇಂದ್ರ ಸರ್ಕಾರ ಸೂಕ್ತ ಸ್ಥಾನಮಾನ ನೀಡಬೇಕು. ಎಲ್ಲಾ ರಾಜ್ಯಗಳಲ್ಲಿ ಶಾಸಕಾಂಗ ಮತ್ತು ಸಂಸತ್ತಿನ ಚುನಾವಣೆಯಲ್ಲಿಯೂ ಒಬಿಸಿ ರಾಜಕೀಯ ಮೀಸಲಾತಿ ತಕ್ಷಣ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ಸೇರಿದಂತೆ ಅನೇಕ ನ್ಯಾಯಾಲಯಗಳಲ್ಲಿ ಒಬಿಸಿ ಸಂಬಂಧಿತ ವ್ಯಾಜ್ಯಗಳಿಗೆ ನ್ಯಾಯ ಸಿಗುತ್ತಿಲ್ಲ. 1931ರ ನಂತರ ದೇಶದಲ್ಲಿ ನಿಯಮಿತವಾಗಿ ಜನಗಣತಿಯನ್ನು ಮಾತ್ರ ನಡೆಸಲಾಗುತ್ತಿದೆ. ಒಮ್ಮೆಯೂ ಕೂಡ ಸರಿಯಾಗಿ ಜಾತಿ ಜನಗಣತಿ ನಡೆಯದೇ ಇರುವುದು ಈ ದತ್ತಾಂಶಗಳ ಕೊರತೆಗೆ ಕಾರಣವಾಗಿದೆ. ಇದನ್ನು ಸರಿಪಡಿಸಲು ಸದ್ಯ ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜಾತಿ ಜನಗಣತಿ ನಡೆಸುತ್ತಿದೆ. ಈಗಲಾದರೂ ಪಾರದರ್ಶಕವಾಗಿ ಕೇಂದ್ರ ಸರ್ಕಾರ ಜಾತಿಗಣತಿ ನಡೆಸಬೇಕು ಜಾತಿ ಕಲಂನಲ್ಲಿ ಒಬಿಸಿ ಕಲಂ ಅಳವಡಿಸಬೇಕು ಎಂದರು

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ರಾಜ್ಯ ಸರ್ಕಾರ ಹಿಂದೆ ಅನೇಕ ಒಬಿಸಿ ಸಮುದಾಯಗಳಿಗೆ ನಿಗಮಗಳನ್ನು ಘೋಷಿಸಲಾಗಿತ್ತು. ಈ ನಿಗಮಗಳು ಹಣಕಾಸಿನ ನೆರವಿಲ್ಲದೇ ಸೊರಗಿವೆ. ಈ ಎಲ್ಲ ನಿಗಮಗಳಿಗೆ ತಲಾ ನೂರು ಕೋಟಿಯ ಅನುದಾನ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಸುದ್ದಿಗೋಷ್ಢಿಯಲ್ಲಿ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್, ಶಿವಪ್ಪ ಲಮಾಣಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon