ಬೆಂಗಳೂರು: ಗಾಂಧಿನಗರದ ಆನಂದ್ ರಾವ್ ವೃತ್ತದ ಬೆಸ್ಕಾಂ ಸಬ್ ಡಿವಿಷನ್ 11 ಕಚೇರಿಯಲ್ಲಿ ಮಂಗಳವಾರ ವಿಜಯದಶಮಿ ಹಾಗೂ ಆಯುಧ ಪೂಜೆಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಇಂಜಿನಿಯರ್ ಮಂಜುನಾಥ್ ಟಿ, ಪ್ರತಿವರ್ಷದಂತೆ ಈ ವರ್ಷವೂ ಆಯುಧ ಪೂಜೆ ಮತ್ತು ವಿಜಯದಶಮಿಯನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಮತ್ತು ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ರಜಾ ದಿನದಲ್ಲಿಯೂ ನಮ್ಮ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಗ್ರಾಹಕರೇ ದೇವರು ಎಂದು ಭಾವಿಸಿ ಅವರ ಸೇವೆಗೆ ಸಿಬ್ಬಂದಿಗಳು ಸದಾ ಸಿದ್ಧರಿದ್ದು, ಸೇವೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಚಾಮುಂಡೇಶ್ವರಿ ತಾಯಿ ಕಾಪಾಡಲೆಂದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಗಿದೆ. ಎಲ್ಲಾ ಸಿಬ್ಬಂದಿಗಳು ಪರಸ್ಪರ ಪ್ರೋತ್ಸಾಹಿಸಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ದೇವರ ಕೃಪೆ ಅತ್ಯಗತ್ಯ ಎಂದು ಹೇಳಿದರು.
ಈ ವೇಳೆ ಸಂಸ್ಥೆಯ ಸಿಬ್ಬಂದಿಗಳು ಮಾತನಾಡಿ, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳನ್ನು ಕೋರುತ್ತೇವೆ, ಈ ವರ್ಷವೂ ಬಹಳ ವಿಜೃಂಭಣೆಯಿಂದ ಆಯುಧ ಪೂಜೆ ಆಚರಿಸಲಾಗಿದೆ. ನಮ್ಮ ಉಪವಿಭಾಗದ ಎಲ್ಲಾ ಲೈನ್‌ಮನ್‌ಗಳು ಹಾಗೂ ಸಿಬ್ಬಂದಿಗಳು ಯಾವುದೇ ತೊಂದರೆಗೆ ಒಳಗಾಗದೆ, ಸುರಕ್ಷತೆಗೆ ಮೊದಲ ಪ್ರಾಮುಖ್ಯತೆ ನೀಡಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ ಎಂದು ಹಾರೈಸಿದರು.














