ಕಲಿತ ಜ್ಞಾನವನ್ನು ಬಳಸಿಕೊಳ್ಳುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕು: ದೇವೇಂದ್ರ ಮಲ್ಹೋತ್ರ

WhatsApp
Telegram
Facebook
Twitter
LinkedIn

ಬೆಂಗಳೂರು: ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಬಾರದು. ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿಪ್ರೋ ಕಂಪನಿಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ದೇವೇಂದ್ರ ಮಲ್ಹೋತ್ರ ಹೇಳಿದರು.

ನಗರದ ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಬಿಎನ್ಎಂಐಟಿ) ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಾಂತ್ರಿಕ ಜ್ಞಾನ, ಸಂವಹನ ಕೌಶಲ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹಾಗೂ ತಂಡವಾಗಿ ಕೆಲಸ ಮಾಡುವ ಗುಣಗಳು ಅತ್ಯಂತ ಮುಖ್ಯವಾಗಿವೆ. ತಂತ್ರಜ್ಞಾನ ಕ್ಷೇತ್ರವು ನಿರಂತರವಾಗಿ ಬದಲಾಗುತ್ತಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ತಂತ್ರಜ್ಞಾನಗಳು ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿವೆ. ಈ ಬದಲಾವಣೆಗಳಿಗೆ ಹೊಂದಿಕೊಳ್ಳಲು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಶಿಸ್ತಿಗೆ ಆದ್ಯತೆ ನೀಡಬೇಕು. ಉದ್ಯೋಗಾವಕಾಶಗಳನ್ನು ಪಡೆಯುವುದರ ಜತೆಗೆ ಸಮಾಜಕ್ಕೆ ಉಪಯುಕ್ತವಾದ ಕೊಡುಗೆ ನೀಡುವ ಗುರಿಯನ್ನೂ ಹೊಂದಬೇಕು ಎಂದು ದೇವೇಂದ್ರ ಮಲ್ಹೋತ್ರ ಕರೆ ನೀಡಿದರು.

ಬಿಎನ್ಎಂ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾರಾಯಣ ರಾವ್ ಆರ್.ಮಾನೆ ಮಾತನಾಡಿ, ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಜತೆಗೆ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಜ್ಞಾನಕ್ಕಾಗಿ ಓದಬೇಕು. ಕಂಪನಿಯು ನಿಮ್ಮ ಅಂಕಗಳ ಜತೆಗೆ ನಿಮ್ಮ ಪ್ರತಿಭೆಗೆ ಹೆಚ್ಚು ಬೆಲೆ ನೀಡಲಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನಿಮ್ಮ ಜ್ಞಾನ ಬಳಕೆ ಮಾಡಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಹೋಗುವ ಮೂಲಕ ಪಾಲಕರಿಗೆ ಮತ್ತು ಶಿಕ್ಷಕರಿಗೆ ಒಳ್ಳೆಯ ಗೌರವ ತಂದುಕೊಡಬೇಕು ಎಂದರು.

ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 576 ವಿದ್ಯಾರ್ಥಿಗಳು ಪದವಿ ಪಡೆದರು. ಈ ಪೈಕಿ ಮೋನಿಷಾ ನಾಲ್ಕು ಹಾಗೂ ಹರ್ಷಿತಾ ಎರಡು ಚಿನ್ನ ಸೇರಿದಂತೆ 34 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಬಿ. ಕೆ. ಜಯಣ್ಣ, ಉಪ ನಿರ್ದೇಶಕರು ಡಾ. ಜಿ. ಎನ್. ಕೃಷ್ಣಮೂರ್ತಿ, ಡೀನ್ ಈಶ್ವರ್ ಎನ್. ಮಾನೆ, , ಕಾಲೇಜಿನ ಹೆಚ್ಚುವರಿ ನಿರ್ದೇಶಕರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ವೈ. ಕುಲಕರ್ಣಿ, ಜಂಟಿ ಕಾರ್ಯದರ್ಶಿ ಅಶೋಕ್ ಆರ್.ಮಾನೆ, ವಿಟಿಯು ಕಾರ್ಯಕಾರಿ ಸಮಿತಿ ಸದಸ್ಯ ಡಾ. ಕರುಣಾಕರ ರೈ, ನಿರ್ದೇಶಕ ಟಿ. ಜೆ. ರಾಮ ಮೂರ್ತಿ ಇತರರು ಇದ್ದರು.

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon