ಬೆಂಗಳೂರು: ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು ನಗರ ಜಿಲ್ಲೆ ವತಿಯಿಂದ ಹಿರಿಯ ನಾಗರಿಕರಿಗಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಬಿರ(ಡಿಮೆನ್ಸಿಯ ಸ್ಕ್ರೀನಿಂಗ್) ಅನ್ನು ವಿದ್ಯಾರಣ್ಯಪುರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ನಾಗರೀಕರ ವೇದಿಕೆ ವಿದ್ಯಾರಣ್ಯಪುರ ಬೆಂಗಳೂರು ಇಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯಾರಣ್ಯಪುರ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಖಂಡೋಜಿರಾವ್ ಕದಂ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳಾದ ಕೃಷ್ಣಮೂರ್ತಿ ಕೆ ಡಿಮೆನ್ಸಿಯ ಇಂಡಿಯಾ ಅಲೆಯನ್ಸ್ ಸ್ವಯಂ ಸೇವಾ ಸಂಸ್ಥೆಯ ಆನಂದ್ ಹಾಗೂ ಚಾಮುಂಡಿ ಯೋಗಕ್ಷೇಮ ಕೇಂದ್ರ ಅಮೃತ ನಗರದ ಮುನಿಸ್ವಾಮಿ ಉಪಸ್ಥಿತರಿದ್ದರು.














