ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 8ನೇ ರೈಲಿನ ಸೇರ್ಪಡೆ

WhatsApp
Telegram
Facebook
Twitter
LinkedIn

ಬೆಂಗಳೂರು: ರಾಜಧಾನಿಯ ಸಂಚಾರ ದಟ್ಟನೆಗೆ ಪರ್ಯಾಯ ಸಾರಿಗೆ ವ್ಯವಸ್ಥೆಯಾದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನೂತನ 8ನೇ ರೈಲು ಸೇರ್ಪಡೆಯಾಗಿದ್ದು, ನಾಳೆಯಿಂದ ಸೇವೆ ಆರಂಭಿಸಲಿದೆ.

2025ರ ಆಗಸ್ಟ್ ತಿಂಗಳಲ್ಲಿ ಅಧಿಕೃತವಾಗಿ ಸಂಚಾರ ಪ್ರಾರಂಭಿಸಿದ ಹಳದಿ ಮಾರ್ಗದಲ್ಲಿ ಈವರೆಗೂ 7 ರೈಲುಗಳು ಓಡಾಟ ನಡೆಸಿದ್ದವು. ಈ ಮಾರ್ಗದಲ್ಲಿ ಇನ್ನೂ ಹೆಚ್ಚಿನ ರೈಲುಗಳ ಅವಶ್ಯ ಇದ್ದ ಕಾರಣ. ಬಿಎಂಆರ್‌ಸಿಎಲ್ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ಮತ್ತೊಂದು ಮೆಟ್ರೋ ರೈಲನ್ನು ಸೇರಿಸಿದೆ.

ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವದಿಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ.

ಇನ್ನು ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ತಿಳಿಸಿದ್ದು, ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ.

ಸುಮಾರು 19.14 ಕಿ.ಮೀ ಇರುವ ಹಳದಿ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಈ ಮಾರ್ಗದಲ್ಲಿ ಲಕ್ಷಾಂತರ ಜನರು ಮೆಟ್ರೋ ಸೇವೆ ಬಳಸಿಕೊಳ್ಳುವುದರಿಂದ ಈ ಭಾಗದ ರಸ್ತೆ ಸಂಚಾರ ದಟ್ಟಣೆ ಮತ್ತಷ್ಟು ಕಡಿಮೆಯಾಗುವ ವಿಶ್ವಾಸವನ್ನು ಬಿಎಂಆರ್‌ಸಿಎಲ್ ವ್ಯಕ್ತಪಡಿಸಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon