ಎಸ್.ಎಸ್.ಬಿ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

ನವದೆಹಲಿ: ಸಶಸ್ತ್ರ ಸೀಮಾ ಬಲದಲ್ಲಿನ 233 ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

10ನೇ, 12ನೇ ತರಗತಿ, ಐಟಿಐ/ಡಿಪ್ಲೊಮಾ ಅರ್ಹತೆ ಹೊಂದಿರುವ 18 ರಿಂದ 27 ವರ್ಷದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, 25,500 ದಿಂದ 81,100 ರೂ. ವೇತನ ಪೇ ಬ್ಯಾಂಡ್ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳ ಆಯ್ಕೆಯನ್ನು ಒಟ್ಟು ನಾಲ್ಕು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊದಲಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ತೇರ್ಗಡೆಯಾದವರಿಗೆ ದೈಹಿಕ ದಕ್ಷತೆಯ ಪರೀಕ್ಷೆ ಮತ್ತು ದೈಹಿಕ ಪ್ರಮಾಣೀಕರಣ ಪರೀಕ್ಷೆಗಳು ಇರಲಿವೆ. ಈ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳನ್ನು ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆಯಾಗಲಿದ್ದಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡುವ ಮುನ್ನ ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿ, ವಯಸ್ಸಿನ ಪುರಾವೆ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ನಂತರ ಎಸ್‌ಎಸ್‌ಬಿಯ ಅಧಿಕೃತ ವೆಬ್‌ಸೈಟ್‌ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಅಗತ್ಯವಿರುವ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು. ತಮ್ಮ ವರ್ಗಕ್ಕೆ ಅನ್ವಯವಾಗುವ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಸಂಖ್ಯೆಯನ್ನು ಮುತುವರ್ಜಿಯಿಂದ ಶೇಖರಿಸಿಟ್ಟುಕೊಳ್ಳಬೇಕು ಎಂದು ಎಸ್.ಎಸ್.ಬಿ ಪ್ರಕಟಣೆಯಲ್ಲಿ ತಿಳಿಸಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon