ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

ಬೆಂಗಳೂರು: ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಎಂ.ಟೆಕ್ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ “Pedagogy” ವಿಷಯವನ್ನು ಬೋಧಿಸಲು ಅತಿಥಿ ಉಪನ್ಯಾಸಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಂ.ಇಡಿ ಪದವಿ ಅಥವಾ ಶಿಕ್ಷಣ ವಿಷಯದಲ್ಲಿ ಪಿ.ಹೆಚ್.ಡಿ ಹೊಂದಿರಬೇಕು. ಎನ್.ಇ.ಟಿ, ಎಸ್.ಎಲ್.ಇ.ಟಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ನೇಮಕಾತಿಯು ಎಐಸಿಟಿಇ/ಯುಜಿಸಿ ನಿಯಮಗಳಿಗನುಸಾರವಾಗಿ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.uvce.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರ ಕಛೇರಿ, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂದರ್ಶನದ ದಿನಾಂಕವನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುವುದು ಎಂದು ಯುವಿಸಿಇ ಆಡಳಿತ ಮಂಡಳಿ ಪ್ರಕಟಿಸಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon