ಬೆಳಗಾವಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ತಾಲೂಕು ಪಂಚಾಯತ್ ಬೆಳಗಾವಿಯ ಸಹಾಯಕ ನಿರ್ದೇಶಕರಾದ ಬಸವಂತ ಕಡೆಮಣಿ ಅವರ ತಾಯಿ ಪಾರ್ವತಿ ಧೂಲ್ಯಾಪ್ಪ ಕಡೆಮಣಿ ಅವರು ಜುಲೈ 24ರಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಅವರ ಅಂತ್ಯಕ್ರಿಯೆ ಕುಟುಂಬದವರ ಸಮ್ಮುಖದಲ್ಲಿ ನೆರವೇರಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಲವರು ಪ್ರಾರ್ಥಿಸಿದ್ದಾರೆ.














