ಬೆಳಗಾವಿ: ಪಂಚಾಯತ್ ರಾಜ್ 2024-25 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ 195 ಗ್ರಾಮಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗಾವಿ ತಾಲೂಕಿಗೆ ಸಂಬಂಧಪಟ್ಟಂತೆ ಕಲಕಾಂಬ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ.
ಈ ಕುರಿತು ಮಾತನಾಡಿರುವ ಕಲಕಾಂಬ ಗ್ರಾಮ ಪಂಚಾಯತಿ ಪಿಡಿಒ ಗೋಪಾಲ್ ಗುಡಸಿ ಕಲಕಾಂಬ ಗ್ರಾಮ ಪಂಚಾಯತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಇದಕ್ಕೆ ಶ್ರಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಮತ್ತು ಸಿಬ್ಬಂದಿಗಳ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಸಹಕಾರವನ್ನು ನೀಡಿರುವ ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ಮುಖ್ಯವಾಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾದ ಯಶವಂತ್ ಅವರಿಗೆ ಆಭಾರಿಯಾಗಿದ್ದೇನೆ. ಆಯ್ಕೆಯಾಗಿರುವ ಬೆಳಗಾವಿ ಜಿಲ್ಲೆಯ ಇತರ ಗ್ರಾಮ ಪಂಚಾಯಿತಿಗಳಿಗೆ ಸಹ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.















