ಮೂರು ವರ್ಷದಲ್ಲಿ ಎಷ್ಟು ಸರ್ಕಾರಿ ಉದ್ಯೋಗ ಸೃಷ್ಟಿಯಾಗಿದೆ ಎನ್ನುವ ಲೆಕ್ಕ ಕೊಡಲಿ: ಬಸವರಾಜ್ ಬೊಮ್ಮಾಯಿ

WhatsApp
Telegram
Facebook
Twitter
LinkedIn

ಬೆಂಗಳೂರು: ತಮ್ಮ ತಪ್ಪು ಮತ್ತು ನಿಷ್ಕ್ರಿಯತೆಗೆ ಹಿಂದಿನ ಸರ್ಕಾರವನ್ನು ದೂರುವ ಚಾಳಿ ಸಿಎಂ ಸಿದ್ದರಾಮಯ್ಯ ರಿಗಿದೆ. ಕಳೆದ ಮೂರು ವರ್ಷದಲ್ಲಿ ಎಷ್ಟು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ ಎನ್ನುವ ಲೆಕ್ಕವನ್ನು ನಮ್ಮ ನಾಡಿನ ಯುವಕರಿಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಅಭಿವೃದ್ಧಿ ಶೇ 7.5% ಕ್ಕಿಂತ ಹೆಚ್ಚು ಇರುವ ಪರಿಣಾಮ ಖಾಸಗಿ ವಲಯದಲ್ಲಿ ಪ್ರತಿ ವರ್ಷ ಎರಡು ಕೋಟಿ ಕೆಲಸಗಳು ಮತ್ತು ಸ್ವಯಂ ಉದ್ಯೋಗಗಳು ಸೃಷ್ಟಿಯಾಗಿವೆ. ಆರ್ಥಿಕ ಅಭಿವೃದ್ಧಿಯ ಲಾಭ ಯುವಕರಿಗೆ ಮುಟ್ಟುತ್ತಿದೆ. ಆದಾಗ್ಯೂ ಕೂಡ ಉದ್ಯೋಗ ಸೃಷ್ಟಿಯಲ್ಲಿ ನಮ್ಮ ಭಾರತದ ಉತ್ಪಾದನಾ ವಲಯ ಹಾಗೂ ಸೇವಾ ವಲಯ ಹೆಚ್ಚು ಗಮನ ಕೊಡುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಈ ಸರ್ಕಾರ ಅವರಿಗೆ ಪೂರ್ಣ ಪ್ರಮಾಣದ ಆದೇಶ ನೀಡಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 14 ಸಾವಿರ ಹುದ್ದೆಗಳ ನೇಮಕ ಪ್ರಾರಂಭಿಸಲಾಗಿತ್ತು, ಅದು ಕೂಡ ವಿಳಂಬ ಆಗಿದೆ. ಮತ್ತು ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಸಲುವಾಗಿ ಬಜೆಟ್ ನಲ್ಲಿ ಎಲ್ಲ ಆರ್ಥಿಕ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ನಿರುದ್ಯೋಗ ಹೆಚ್ಚಾಗಲು ಕಾರಣವಾಗಿದೆ‌ ಎಂದು ಆರೋಪಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon