ಬೆಳಗಾವಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 2025 -26 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ .16 ಮತ್ತು 17ರಂದು ನಡೆಯಲಿವೆ.
ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಜ. 16ರ ಬೆಳಗ್ಗೆ ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಡೆಸಿಕೊಡಲಿದ್ದಾರೆ. ಕ್ರೀಡಾ ಜ್ಯೋತಿಯನ್ನು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸ್ವೀಕರಿಸಲಿದ್ದಾರೆ. ಧ್ವಜಾರೋಹಣವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೆರವೇರಿಸಲಿದ್ದಾರೆ.
ವೇದಿಕೆಯಲ್ಲಿ ಬೆಳಗಾವಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ತಾನಾಜಿ ರಾಯವ್ವಗೋಳ, ಉಪಾಧ್ಯಕ್ಷ ಬಿ.ಎ ಕುಂಬಾರ ಉಪಸ್ಥಿತರಿರಲಿದ್ದಾರೆ.















