ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿ.ಕೆ. ಶಿವಕುಮಾರ್

WhatsApp
Telegram
Facebook
Twitter
LinkedIn

ಬೆಂಗಳೂರು: ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಅಸ್ಸಾಂಗೆ ಪ್ರಯಾಣ ಬೆಳೆಸುತ್ತಿರುವ ಬಗ್ಗೆ ಕೇಳಿದಾಗ, ನಾನು ಅಸ್ಸಾಂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದು, ಕೇರಳಕ್ಕೂ ಹೋಗಬೇಕು ಹಾಗೂ ಕರ್ನಾಟಕದ ಉಪಚುನಾವಣೆಗಳನ್ನು ನೋಡಿಕೊಳ್ಳಬೇಕು.ಅಸ್ಸಾಂ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಈ ಕಾರಣಕ್ಕೆ ಅಲ್ಲಿನ ಜನ ಬದಲಾವಣೆ ಬಯಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಜನರ ಪ್ರಗತಿ ಆಗಿಲ್ಲ ಎಂದರು.

ಅಸ್ಸಾಂನಲ್ಲಿ ಸಚಿವ ಸಂಪುಟ ಪುನಾರಚನೆ ಬಳಿಕ ಅಸ್ಸಾಂ ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಿದೆ. ಅವರ ಪಕ್ಷದಲ್ಲಿ ಯಾರೂ ಸಂತೋಷವಾಗಿಲ್ಲ. ಬಿಜೆಪಿಗರು ತಮ್ಮ ಪಕ್ಷದಲ್ಲಿ ಅವಕಾಶವಿಲ್ಲ ಎಂದು ಬೇಸರಗೊಂಡಿದ್ದಾರೆ ಎಂದು ತಿಳಿಸಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon