ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಭಾನುವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರುಗಳು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು.

ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಪಕ್ಷದಲ್ಲಿರುವಾಗ ಯಾವ  ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.

ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ:

ಶ್ರೀರಾಮುಲು, ಜನಾರ್ಧನ ರೆಡ್ಡಿ ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ  ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದಾರೆ ಎಂದರು.

ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ:

ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ  ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು. ಸಂಸದೀಯ ವ್ಯವಸ್ಥೆಯಲ್ಲಿ ಕೂಡ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಕಾಂಗ್ರೆಸ್  ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ:

ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್  ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ? ಎಂದು ಪ್ರಶ್ನಿಸಿದರು.

ವಿಬಿಜಿ ರಾಮ್ ಜಿ ರದ್ದಿಗೆ ಒತ್ತಾಯಿಸಲು ಅಧಿವೇಶನ:

ಅಧಿವೇಶನ ಆಯೋಜಿಸಿರುವುದು ರಾಜಕೀಯ ದುರ್ಬಳಕೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ.ಅದಕ್ಕಾಗಿ ಕರೆದಿದ್ದೇವೆ. ಮನೆರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿರುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ ಎನ್ನುವುದು ಇದರ ಅರ್ಥ. ಈ ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು. ಅದರರ್ಥ ರಾಮ್ ಅಲ್ಲ ಎಂದರು.

ಲೋಕಾಯುಕ್ತ ದಾಳಿಯ ಕಾನೂನಿನ ಕ್ರಮಕ್ಕೆ ಅಡ್ಡಿಯಿಲ್ಲ:

ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಹಾಗೂ ಅಬಕಾರಿ ಸಚಿವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತಾಡಿ, ಈ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ. 40% ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಆರೋಪ ಮಾಡಿದ್ದರಲ್ಲ ಎಂದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon