ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

WhatsApp
Telegram
Facebook
Twitter
LinkedIn

ಗದಗ: ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಆಪ್ತಕಾರ್ಯದರ್ಶಿಗಳಿಬ್ಬರು ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಎಸ್.ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಶಾಸಕ ಚಂದ್ರು ಲಮಾಣಿ, ಪಿಎಗಳಾದ ಮಂಜುನಾಥ್, ಗುರು ಲಮಾಣಿ ಅವರುಗಳನ್ನು ಬಂಧಿಸಲಾಗಿದೆ.

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿತ್ತು, ಮುಂಗಡವಾಗಿ 5 ಲಕ್ಷ ಹಣವನ್ನು ಪಡೆಯುತ್ತಿದ್ದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

 

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon