ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಬಿ.ಆರ್. ರಾಠೋಡ ನೇಮಕ

WhatsApp
Telegram
Facebook
Twitter
LinkedIn

ಬೆಂಗಳೂರು/ಬೆಳಗಾವಿ: ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಚೇರಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬಿ.ಆರ್. ರಾಠೋಡ ಅವರನ್ನು ನೇಮಿಸಲಾಗಿದೆ. ಈ ಕುರಿತು ಶನಿವಾರ ಸರ್ಕಾರ ಆದೇಶ ಹೊರಡಿಸಲಾಗಿದೆ.

ಈ ನೇಮಕಕ್ಕೂ ಮುನ್ನ ಬಿ.ಆರ್. ರಾಠೋಡ ಇವರು ಕರ್ನಾಟಕ ನೀರಾವರಿ ನಿಗಮ ನಿಯಮಿತ, ನೀರಾವರಿ ಉತ್ತರ ವಲಯ ಬೆಳಗಾವಿ ಕಚೇರಿಯ ಮುಖ್ಯ ಅಭಿಯಂತರರಾಗಿದ್ದರು. ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಶ ಬಿ. ಅಮ್ಮಿನಬಾವಿ ಅವರ ಜಾಗಕ್ಕೆ ಬಿ.ಆರ್. ರಾಠೋಡ ಅವರನ್ನು ವರ್ಗಾವಣೆ ಮಾಡಲಾಗಿದೆ.

ರಾಜೇಶ ಬಿ. ಅಮ್ಮಿನಬಾವಿ, ಮುಖ್ಯ ಅಭಿಯಂತರರು ಇವರು ಮುಂದಿನ ಸ್ಥಳ ನಿಯುಕ್ತಿಗಾಗಿ ಸರ್ಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon