ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ಮಂತ್ರಿಮಂಡಲದಲ್ಲಿ ಬಿ ಝಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕುಬ್ತೆಂದು ಕೇಂದ್ರದ ಮತ್ತು ರಾಜ್ಯದ ಕಾಂಗ್ರೆಸ್ ವರಿಷ್ಠ ನಾಯಕರಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ (ರಿ) (ಸಂಯೋಜಕ) ಬೆಂಗಳೂರು ನಗರಾಧ್ಯಕ್ಷ ಜಿ.ಮದಿಯರಸನ್ ಒತ್ತಾಯಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ವಸತಿ, ವಕ್ಫ್, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಬಡವರ ಕಲ್ಯಾಣಕ್ಕಾಗಿ ಉತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಜಾತಿಯ ಬಡವರಿಗೆ ಲಕ್ಷಾಂತರ ಮನೆಗಳನ್ನು ಸರ್ಕಾರದಿಂದ ನಿರ್ಮಿಸಿಕೊಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ಮತ್ತು ಕಾಗವಾಡ ತಾಲ್ಲೂಕಿನ ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ನೆರೆಸಂತ್ರಸ್ಥರಿಗೆ ಮನೆಗಳನ್ನು ಕಟ್ಟಿಕೊಡುವ ಕಾರ್ಯವನ್ನು ಮುಂದುವರೆಸಿದ್ದಾರೆ. ಇಂಥಹ ಜನಪ್ರಿಯ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮರ್ ರವರಿಗೆ ಮನವಿ ಸಲ್ಲಿಸಲಾಗುವುದು. ಒಂದು ವೇಳೆ ಬಿ ಝಡ್ ಜಮೀರ್ ಅಹ್ಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ (ಸಂಯೋಜಕ) ರಾಜ್ಯ ಸಂಚಾಲಕ ಎನ್ ಶಂಕರ್, ಮುಖಂಡರುಗಳಾದ ಜೇಮ್ಸ್, ಮಹೇಂದ್ರನ್, ಗೋಪಿನಾಥ್, ರಫೀಕ್ ಪಾಷ, ಬಾಬು, ರಂಜಿತ್, ಜಾನ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.














