ಮಹಿಳಾ ವಿರೋಧಿ ಕಾಂಗ್ರೆಸ್, ಇಂಡಿ ಕೂಟದ ವಿರುದ್ಧ ಹೋರಾಟ: ಸಿ.ಮಂಜುಳಾ

WhatsApp
Telegram
Facebook
Twitter
LinkedIn

ಬೆಂಗಳೂರು: ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಕೂಟದ ವಿರುದ್ಧ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏ. 25ರಂದು ಆಕ್ರೋಶ ಯಾತ್ರೆ ಮತ್ತು ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಸಿ.ಮಂಜುಳಾ ತಿಳಿಸಿದರು.

ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಇದೇ 27ರಿಂದ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಬಿಜೆಪಿಯ 300 ಸಂಘಟನಾತ್ಮಕ ಮಂಡಲಗಳಲ್ಲಿ ಹೋರಾಟವೂ ನಡೆಯಲಿದೆ. ಬಳಿಕ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್ ರ್ಯಾಲಿಯನ್ನು ಸಂಘಟಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

ಇಂದಿನಿಂದ ಕೇಂದ್ರ ಸಚಿವರು, ಸಂಸದರು ವಿಭಾಗ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರಿನಲ್ಲಿ ಸಂಸದ ಬೃಜೇಶ್ ಚೌಟ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ, ಕೇಂದ್ರ ಸಚಿವ ಸೋಮಣ್ಣ 23ರಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನೀತಿಯ ಕುರಿತು ತಿಳಿಸಲಿದ್ದಾರೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷವು ಇತಿಹಾಸದ ಉದ್ದಕ್ಕೂ ತನ್ನ ಮಹಿಳಾ ವಿರೋಧಿ ಧೋರಣೆ ಪ್ರದರ್ಶನ ಮಾಡಿದ ಕುರಿತು ತಿಳಿಸಲಿದ್ದಾರೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರು ಮಾತ್ರ ಮಹಿಳೆಯರು ಎಂದು ಕಾಂಗ್ರೆಸ್ ಭಾವಿಸಿದಂತಿದೆ. ಸಾಮಾನ್ಯ ಮಹಿಳೆಯರಿಗೆ ಸಿಗುವ ಅವಕಾಶಗಳನ್ನು ಅದು ಕಿತ್ತುಕೊಂಡಿದೆ. ಭಾರತದ ನಾರಿಯರು ಕೇವಲ ಹೂವಲ್ಲ; ಅವರು ಜ್ವಾಲೆ ಕೂಡ ಎಂಬ ನಿಟ್ಟಿನಲ್ಲಿ ಈ ಆಕ್ರೋಶವನ್ನು ನಾವು ವ್ಯಕ್ತಪಡಿಸಲಿದ್ದೇವೆ ಎಂದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon