ಸಿಇಟಿ ಕೀ ಉತ್ತರ ಪ್ರಕಟಿಸಿದ ಕೆಇಎ

WhatsApp
Telegram
Facebook
Twitter
LinkedIn

ಬೆಂಗಳೂರು: ಇದೇ 23 ಮತ್ತು 24ರಂದು ನಡೆದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್ ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು. ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon