ವಿಕಲಚೇತನ ಕ್ಷೇಮಾಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಗುಣಶೇಖರ್ ಗೆ ಛತ್ರಪತಿ ಶಿವಾಜಿ ಮಹಾರಾಜ್ ಪ್ರಶಸ್ತಿ

WhatsApp
Telegram
Facebook
Twitter
LinkedIn

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಅಖಿಲ ಭಾರತೀಯ ಮರಾಠ ಮಹಾಸಂಘದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಕಲಚೇತನ ಕ್ಷೇಮಾಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಗುಣಶೇಖರ್  ಗೆ ಛತ್ರಪತಿ ಶಿವಾಜಿ ಮಹಾರಾಜ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀ ಗೋಸಾಯಿ ಮಹಾಸಂಸ್ಥಾನ ಮಠ ಶ್ರೀ ಭವಾನಿ ಪೀಠ ಬೆಂಗಳೂರು ಸಂಸ್ಥಾನದ ಸ್ವಾಮೀಜಿ ಶ್ರೀ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿರವರ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ರಾಜ್ಯಾಧ್ಯಕ್ಷ ಎಸ್ ಸುರೇಶ್ ರಾವ್ ವಹಿಸಿದ್ದರುಅಖಿಲ ಭಾರತೀಯ ಮಾರಾಟ ಮಹಾಸಂಘದ ರಾಜ್ಯಾಧ್ಯಕ್ಷ ಡಾ. ಎಂ ಹೆಚ್ ಆರ್ ದಳವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇನ್ನು ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಹಾಗೂ ಗೌರವ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಕಲಚೇತನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುಣಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನು ಮರಾಠ ಸಮುದಾಯದ ಹಲವು ಸಾಧಕರನ್ನು ಇದೆ ಸಂದರ್ಭದಲ್ಲಿ ಗೌರವಿಸಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಗುಣಶೇಖರ್, ಅಖಿಲ ಭಾರತೀಯ ಮರಾಠ ಮಹಾಸಂಘವು ಇಂದು ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ನಮ್ಮ ವಿಕಲಚೇತನ ಕ್ಷೇತ್ರಕ್ಕೆ ಚೈತನ್ಯ ನೀಡಿದಂತಾಗಿದೆ. ಸರ್ಕಾರವು ನಮ್ಮನ್ನು ಗುರುತಿಸದೆ ಕಡೆಗಣಿಸುತ್ತಿರುವ ಇಂದಿನ ಸಂದರ್ಭದಲ್ಲಿ ಅಖಿಲ ಭಾರತೀಯ ಮರಾಠ ಸಂಘವು ನಮ್ಮನ್ನು ಎಲ್ಲರಂತೆ ಗುರುತಿಸಿ ಗೌರವಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon