ನಾರಿಶಕ್ತಿ ವಂದನ ಮಸೂದೆ ಹಿನ್ನಡೆಗೆ ಕಾಂಗ್ರೆಸ್ ಪಕ್ಷ ಕಾರಣ: ಸಿ.ಕೆ ರಾಮಮೂರ್ತಿ

WhatsApp
Telegram
Facebook
Twitter
LinkedIn

ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಷ್ಟ್ರ ಮಟ್ಟದಲ್ಲಿ ಮುಳುತ್ತಿರುವ ಹಡಗು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ  ನಾರಿಶಕ್ತಿ ವಂದನ ಮಸೂದೆ ವಿರೋಧಿಸಿ ಮಹಿಳಾ ವಿರೋಧಿ ಪಕ್ಷವಾಗಿ ಹೊರಹೊಮ್ಮಿದೆ ಎಂದು ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಹೇಳಿದರು.

ಶನಿವಾರ ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ನಿಕಟಪೂರ್ವ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧಿಕಾರ ಇರಲಿ ಇಲ್ಲದಿರಲಿ ಜನ ಸೇವೆ ನಿರಂತರವಾಗಿ ಕೆ.ಉಮೇಶ್ ಶೆಟ್ಟಿ ಅವರು ಮಾಡುತ್ತಿದ್ದಾರೆ. ಕಳೆದ ಬಾರಿ ಅಲ್ಪ ಮತಗಳಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಿದೆ 2028ರಲ್ಲಿ ಕೆ.ಉಮೇಶ್ ಶೆಟ್ಟಿ ರನ್ನು ಶಾಸಕರಾಗಿ ಆಯ್ಕೆ ಮಾಡಿ ಮಹಿಳೆಯರು ಮಸೂದೆಯನ್ನು ಮಂಡಿಸಲು ಸಹಕಾರ ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಕೆ.ಉಮೇಶ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸ್ವಯಂ ಸೇವಕನಾಗಿ ಸೇವೆ ಮಾಡಬೇಕು ಎಂದು ಹೇಳಿಕೊಡಲಾಗುತ್ತದೆ. ದೇಶ ಮೊದಲು ಎಂದು ಹೇಳಲಾಗುತ್ತದೆ, ನಂತರ ಬಿಜೆಪಿ ಪಕ್ಷ ದೇಶ ಪ್ರೇಮದ ಪಾಠ ಕಲಿಸುತ್ತದೆ. ಆದ್ದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರಮೋದಿ ಅವರ 12 ವರ್ಷಗಳ ಆಡಳಿತದಿಂದ ದೇಶ ಆರ್ಥಿಕವಾಗಿ ಸುಭದ್ರವಾಗಿದೆ. ಕೊರೋನ ಮಹಾಕಾಲ, ಇರಾನ್, ಇಸ್ರೇಲ್ ಯುದ್ದ ಸಂಕಷ್ಟ ಸಮಯವನ್ನು ದಿಟ್ಟತನದಿಂದ ದೇಶದ ಜನರನ್ನು ಮೋದಿಜೀ ಕಾಪಾಡಿದ್ದಾರೆ. ಅವರ ಪ್ರೇರಣೆಯಿಂದ ಹುಟ್ಟಿದ ಮೇಲೆ ಸಾಧನೆ ಮಾಡಬೇಕು ಎಂದು ಪಣತೊಟ್ಟಿದ್ದೇನೆ. ಜನರ ಜೊತೆಯಲ್ಲಿ ನಿಲ್ಲಬೇಕು ಧ್ವನಿ ಇಲ್ಲದ ಜನರ, ನೊಂದು ಬೆಂದವರ ಜೊತೆಯಲ್ಲಿ ಆಸರೆಯಾಗಿ ನಿಲ್ಲಬೇಕು ಎಂದು ಸಾಮಾಜಿಕ ಸೇವಾ ಕಾರ್ಯಗಳು ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದರು.

ಜನರ ಸೇವೆ ಮಾಡಿದರೆ, ಭಗವಂತನ ಸೇವೆ ಮಾಡಿದಂತೆ. ನಿಮ್ಮ ಕಷ್ಟ, ನೋವುಗಳಿಗೆ ಸ್ಪಂದಿಸಿ ನಿಮ್ಮ ಮನೆ ಮಗನಾಗಿ ಸೇವೆ ಮಾಡುತ್ತೇನೆ. ಅಧಿಕಾರಿ ಇರಲಿ, ಇಲ್ಲದಿರಲಿ ನಿಮ್ಮ ಸೇವೆಗೆ ಸದಾ ಸಿದ್ಧನಾಗಿದ್ದೇನೆ. ಮುಂಬರುವ ಜಿಬಿಎ ಪಂಚ ಪಾಲಿಕೆ ಚುನಾವಣೆ ಮತ್ತು 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯಲಿ ಎನ್ನುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ  ಶಿಬಿರ ಹಾಗೂ ಕ್ಯಾನ್ಸರ್ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವರಿಗೆ ಆರ್ಥಿಕ ಸಹಾಯಹಸ್ತ ಹಾಗೂ ವಿಕಲಚೇತನರಿಗೆ ವಿಲ್ ಚೇರ್ ಮತ್ತು ಮಹಿಳೆಯರಿಗೆ ಉಚಿತವಾಗಿ ಸೀರೆಗಳನ್ನು ವಿತರಿಸುವ ಕಾರ್ಯಕ್ರಮಗಳಿಗೆ ಶಾಸಕ ಸಿ.ಕೆ.ರಾಮಮೂರ್ತಿ ಹಾಗೂ ಅಟ್ಟಿಕಾ ಗೋಲ್ಡ್ ಮಾಲೀಕ ಬೊಮ್ಮನಹಳ್ಳಿ ಬಾಬು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್, ಮಾಜಿ ಪಾಲಿಕೆ ಸದಸ್ಯರುಗಳಾದ ರಾಮಪ್ಪ, ರಾಜೇಶ್ವರಿ, ಜಯರತ್ನ ಮತ್ತು ಬಿಜೆಪಿ ಮುಖಂಡರುಗಳಾದ ಕ್ರಾಂತಿರಾಜು, ಡೊಡ್ಡವೀರಯ್ಯ ನಾಗರಭಾವಿ ಎಸ್.ರಾಜು, ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು ಪಾಲ್ಗೊಂಡಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon