ಸಮಾಜದಲ್ಲಿ ಅಸಮಾನತೆ ನೀಗುವವರೆಗೂ ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಆದರೆ ಜನರ ಆಶೀರ್ವಾದದಿಂದ ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನಗೆ ಈ ಬಗ್ಗೆ  ತಿಳಿದಿಲ್ಲ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಹೆಚ್ಚು ಪ್ರಚಾರ ಸಿಗುತ್ತಿದೆ ಎಂದರು.

ರಾಜಕಾರಣ ತೃಪ್ತಿ ತಂದಿದೆ:

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿಯಾಗಿದೆ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ,  ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು. ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. ಅವರು 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

 

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon