ಬೆಂಗಳೂರು: ಬಾಸ್ ಎನ್ನುವ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅದರ ಟೀಸರ್ ಲಾಂಚ್ ಮಾಡಲಾಗಿದೆ. ಆದರೆ ಇದೀಗ ದರ್ಶನ್ ಪರ ವಕೀಲರು ಸಿನಿಮಾ ಬಿಡುಗಡೆಯಾಗದಂತೆ ತಡೆ ಕೋರಿ ಸೆನ್ಸಾರ್ ಮಂಡಳಿಗೆ ಲಾಯರ್ ನೋಟಿಸ್ ಜಾರಿ ಮಾಡಿದ್ದಾರೆ.
ಈಗ ರಿಲೀಸ್ ಆಗಿರುವ ಬಾಸ್ ಸಿನಿಮಾ ಟೀಸರ್ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಹೋಲುವ ರೀತಿಯಲ್ಲಿ ಇರುವಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದರ್ಶನ್ ತಪ್ಪು ಮಾಡಿದ್ದಾರೆ ಅಥವಾ ಮಾಡಿಲ್ಲ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ಅದಕ್ಕೂ ಮೊದಲೇ ಈ ಘಟನೆ ಆಧರಿಸಿ ಸಿನಿಮಾ ಮಾಡಿರುವುದು ತಪ್ಪು ಎಂದು ದರ್ಶನ್ ಪರ ವಕೀಲರು ಸೆನ್ಸರ್ ಮಂಡಳಿಗೆ ನೋಟೀಸ್ ನೀಡಿದ್ದಾರೆ.















