ಬೆಂಗಳೂರು: ಕುಮಾರಸ್ವಾಮಿ ತಮ್ಮ ಅನುಭವದ ಲೆಕ್ಕಾಚಾರದ ಮೇಲೆ ಮಾತನಾಡಿರಬೇಕು. ಅವರಲ್ಲಿ ಏನೋ ಸಮಸ್ಯೆ ಇರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಸೋಮವಾರ ರಾತ್ರಿ ಕೆಎಎಸ್ ಅಧಿಕಾರಿಗಳ ಸಂಘದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯಿಸಿದರು. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸಚಿವ ಸುಧಾಕರ್ ಆರೋಗ್ಯದ ವಿಚಾರ ಮುಚ್ಚಿಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ಯಾವ ಹೆಬ್ಬೆಟ್ಟು, ಏನು ಎಂದು ಗೊತ್ತಿದ್ದರೆ ಅವರೇ ಹೇಳಬೇಕು. ಅವರ ಕುಟುಂಬದವರಿಗೆ ಹೇಳಬೇಕು ಎಂದು ಕುಟುಕಿದರು.
ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕೆ ಮಾತನಾಡುತ್ತಿದ್ದಾರೆ. ಇದರಿಂದ ಅವರ ಘನತೆಗೆ, ಹಿರಿತನಕ್ಕೆ ಗೌರವ ಬರುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹರಿಹಾಯ್ದರು.













