ತಮಿಳುನಾಡು ಚುನಾವಣೆ; ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ. ಸುರೇಶ್ ಹೆಗಲಿಗೆ

WhatsApp
Telegram
Facebook
Twitter
LinkedIn

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೆಗಲಿಗೆ ವಹಿಸಲಾಗಿದೆ.

ರಾಹುಲ್ ಗಾಂಧಿ ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳ ಸಿದ್ಧತೆ ಕುರಿತಂತೆ ಕೇಂದ್ರ ವೀಕ್ಷಕರ ಜತೆ ಸಭೆ ನಡೆಸಿದರು. ಡಿ.ಕೆ. ಸುರೇಶ್ ಪಕ್ಷದ ನಿರ್ದೇಶನದಂತೆ ಕಳೆದ ಕೆಲವು ದಿನಗಳಿಂದ ತಮಿಳುನಾಡು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon