ಬೆಂಗಳೂರು: ಈ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಜನ ಸಾಮಾನ್ಯರ ಆರೋಗ್ಯ ಸೇವೆ ಮಾಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ನಾನು ಕೂಡ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದುಕೊಂಡೇ ಚಿತ್ರ ರಂಗವನ್ನು ಆಯ್ಕೆ ಮಾಡಿಕೊಂಡೆ, ಜನರಿಗೆ ಮನರಂಜನೆ ನೀಡುವುದು ಕೂಡ ಒಂದು ರೀತಿಯ ಭಾಗ್ಯ ಎಂದೆನಿಸಿದ್ದೇನೆ ಎಂದು ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಡಾ.ಶ್ರೀಲೀಲಾ ಹೇಳಿದರು.
ಬೆಂಗಳೂರು- ಮೈಸೂರು ಮುಖ್ಯ ರಸ್ತೆಯಲ್ಲಿರುವ ರಾಜರಾಜೇಶ್ವರಿ ಮೆಡಿ ಕಲ್ ಕಾಲೇಜಿನ ಎಸಿಎಸ್ ಕನ್ವೆನ್ಸನಲ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಪೆಡಿಯಂ -ಕಾರ್ನಿವಾಲ್ -2026 ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿನಿಮಾ ಜಗತ್ತಿಗೆ ಕಾಲಿಟ್ಟಿದ್ದು ಇದೇ ಬೆಂಗಳೂರಿನಿಂದ. ಇಲ್ಲಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ನಾಡಿಮಿಡಿತದ ಅರಿವು ನನಗಿದೆ. ಕಾಲೇಜಿನಲ್ಲಿದ್ದಾಗ ಪ್ರಾಂಶುಪಲರಿಗೆ, ಉಪನ್ಯಾಸಕರೊಂದಿಗೆ, ಹಿರಿಯ ವಿದ್ಯಾರ್ಥಿಗಳ ಜೊತೆ ಮಾತಾಡಲು ಕೂಡ ಹೆದರಿಕೊಳ್ಳುತ್ತಿದ್ದೆ. ಆದರೆ ಈಗ ಬೋಲ್ಡ್ ಪಾತ್ರಗಳನ್ನು ಸಹ ನಿರ್ವಹಿಸುತ್ತಿದ್ದೇನೆ. ಎಂಬಿಬಿಎಸ್ ಅನ್ನು ಸಹ ಇದೀಗ ಮುಗಿಸಿರುವ ಕಾರಣ ಯುವ ಸಮೂಹಕ್ಕೆ ಹೆಚ್ಚು ಕನೆಕ್ಟ್ ಆಗಿದ್ದಾರೆ ಎಂದರು.
ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಸ್ಥಾಪಕ ಕುಲಪತಿ ಡಾ.ಎಂ.ಸಿ. ಷಣ್ಣುಗಂ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣಪಡೆಯುವುದರ ಜತೆಗೆ ಮೌಲ್ಯಾಧಾರಿತ ಬದುಕನ್ನು ರೂಪಿಸಿಕೊಳ್ಳಬೇಕು. ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ವನ್ನು ಕಾಪಾಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕುಇನ್ನು ಮೆಡಿಕಲ್ ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅವರಲ್ಲಿರುವ ಕ್ರೀಡೆ, ಸಾಂಸ್ಕೃತಿಕ ಕಲೆ, ನೃತ್ಯ ಮುಂತಾದ ಪ್ರತಿಭೆಯನ್ನು ಹೊರ ಹಾಕಲು ಇಂತಹ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.














