ಎನ್.ಕೆ ಎಜುಕೇಶನ್ ಸೊಸೈಟಿಯ ಎಸ್‌.ಎಸ್‌.ಎ ಪಿಯು ಕಾಲೇಜಿನಿಂದ ಅದ್ಭುತ ಫಲಿತಾಂಶ

WhatsApp
Telegram
Facebook
Twitter
LinkedIn

ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಎಸ್‌.ಎಸ್‌.ಎ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಈ ಶ್ರೇಷ್ಠ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ.

ಪ್ರಕಟವಾದ ಫಲಿತಾಂಶದಲ್ಲಿ ಕು. ಸೋಹಾ ಶೇಖ್ 600ರಲ್ಲಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕು. ಶ್ರಾವಣಿ ಭಂಡಾರಿ 591 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದು, ಕು. ಅನ್ವಿತಾ ಶೆಟ್ 582 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಈ ಸಾಧನೆಗಾಗಿ ಸಂಸ್ಥೆಯ ಅಧ್ಯಕ್ಷ ನರೇಂದ್ರಕುಮಾರ್ (ಎನ್.ಕೆ), ಕಾಲೇಜಿನ ಪ್ರಾಂಶುಪಾಲರು, ಎಲ್ಲಾ ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರ ಮುಂದಿನ ಭವಿಷ್ಯಕ್ಕೆ ಆಶೀರ್ವಾದಗಳನ್ನು ಕೋರಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸಿನಿಂದ ಪ್ರದೇಶದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಫಲಿತಾಂಶ ಮತ್ತೊಮ್ಮೆ ಸಾಕ್ಷಿಯಾಗಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon