ನಿವೃತ್ತ ನೌಕರ ಸಂಘ ದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

WhatsApp
Telegram
Facebook
Twitter
LinkedIn

ಬೆಂಗಳೂರು: ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಸರ್ಕಾರಿ ನೌಕರರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಿಬಿರಕ್ಕೆ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬೈರಪ್ಪ ಚಾಲನೆ ನೀಡಿದರು.

60 ವರ್ಷಕ್ಕೂ ಮೇಲ್ಪಟ್ಟ 350ಕ್ಕೂ ಮೇಲ್ಪಟ್ಟ ನಿವೃತ್ತ ನೌಕರರು ಮತ್ತು ಸರ್ಕಾರಿ ಹಿರಿಯ ನಾಗರಿಕರು  ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿದ್ದರು. ವಿವಿಧ ವೈದ್ಯ ಸಿಬ್ಬಂದಿಗಳು ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಪರೀಕ್ಷೆ ನಡೆಸಿದರು.

ಶಿಬಿರ ಸಂಪನ್ನಗೊಂಡ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಭೈರಪ್ಪ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ವೈಯಾವಿಕಾಸ್ ಸಂಸ್ಥೆಯ ಸಹಯೋಗದೊಂದಿಗೆ ಕಬ್ಬನ್ ಉದ್ಯಾನವನದ ಸರ್ಕಾರಿ ನೌಕರರ ಭವನದಲ್ಲಿ ಕೇಂದ್ರ ಸಂಘದ ನಿವೃತ್ತ ನೌಕರರಿಗೆ, ಕುಟುಂಬ ಪಿಂಚಣಿದಾರರಿಗೆ ಹಾಗೂ ಹಿರಿಯ ನಾಗರೀಕರಿಗೆ ಅಸ್ಟರ್ ಆಸ್ಪತ್ರೆ ಮತ್ತು ಇತರ ಅನುಭಾವಶಾಲಿಗಳಾದ ಆಸ್ಪತ್ರೆಗಳ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು ಎಂದು ಮಾಹಿತಿ ನೀಡಿದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon