ಜಾಂಬೋಟಿ ಗ್ರಾಪಂ ನಲ್ಲಿ ಅವ್ಯವಹಾರ ಆರೋಪ; ಮತ್ತಷ್ಟು ದಾಖಲೆಗಳು ಬಹಿರಂಗ

WhatsApp
Telegram
Facebook
Twitter
LinkedIn

ಜಾಂಬೋಟಿ (ಬೆಳಗಾವಿ ಜಿಲ್ಲೆ): ಜಾಂಬೋಟಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಪ್ರಜಾ ನೆರಳು ದಿನಪತ್ರಿಕೆಗೆ ಮತ್ತಷ್ಟು ದಾಖಲೆಗಳು ಲಭ್ಯವಾಗಿವೆ. ಈ ಮುನ್ನ ಪ್ರಜಾ ನೆರಳು ಪತ್ರಿಕೆಯಲ್ಲಿ ಜಾಂಬೋಟಿ ಗ್ರಾಪಂ ನಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಪ್ರಕಟವಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ನಕಲಿ ಬಿಲ್ ಗಳು ಸಿಕ್ಕಿವೆ.

ಈ ಭ್ರಷ್ಟಾಚಾರ ಹಾಗೂ ಅಕ್ರಮದ ಜಾಡು ಬೆನ್ನತ್ತಿ ಹೋದಂತೆ ಹಲವಾರು ವಿಷಯಗಳು ಬೆಳಕಿಗೆ ಬರುತ್ತಿವೆ. ಕಾಮಗಾರಿ ನಡೆದಿರುವುದು ಒಂದು ಕಡೆಯಾದರೆ ಇನ್ನಾವುದೋ ಸ್ಥಳದ ಹೆಸರಿನ ಮೇಲೆ ಬಿಲ್ ತೆಗೆಯಲಾಗಿದೆ. ಈ ಅಕ್ರಮದ ಮಾಹಿತಿ ಸಿಕ್ಕ ನಂತರ ಬೆಂಗಳೂರಿನಿಂದ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ತಂಡ ಬಂದು ಪರಿಶೀಲನೆ ಮಾಡಿದೆ. ಈ ಕುರಿತಾಗಿ ಗ್ರಾಮ ಪಂಚಾಯಿತಿಗೆ ದಂಡ ವಿಧಿಸಲಾಗಿದೆ ಎಂಬ ಚರ್ಚೆಗಳು ಜೋರಾಗಿದ್ದರೂ, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಪ್ರಕರಣವೊಂದನ್ನು ನೋಡುವುದಾದರೆ- ಜಾಂಬೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಕೋಟಿ ರೂಪಾಯಿ ಮೊತ್ತದ ಒಂದು ಕಾಮಗಾರಿ ಮುಗಿದಿದೆ. ಆದರೆ ಈ ಕಾಮಗಾರಿ ಪೂರೈಸಿದ ಗುತ್ತಿಗೆದಾರನಿಗೆ ಮಾತ್ರ ಯಾವುದೇ ಹಣ ಪಾವತಿಯಾಗಿಲ್ಲ. ಗ್ರಾಮ ಪಂಚಾಯಿತಿಯವರೇ ಈ ಬಿಲ್ ನೀಡಿಲ್ಲವಾ ಅಥವಾ ರಾಜ್ಯ ಸರ್ಕಾರದ ಮಟ್ಟದಲ್ಲಿ ಈ ಬಿಲ್ ತಡೆ ಹಿಡಿಯಲಾಗಿದೆಯಾ ಎಂಬುದು ಸ್ಪಷ್ಟವಾಗಬೇಕಿದೆ.

ಅಕ್ರಮದಲ್ಲಿ ಭಾಗಿಯಾದ್ದಾರೆ ಎಂದು ಆರೋಪಿಸಲಾಗಿರುವ ಹಿಂದೆ ಈ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿದ್ದ ವ್ಯಕ್ತಿಯು ಬೆಳಗಾವಿ ಹಾಗೂ ಸುತ್ತಮುತ್ತ ಸಾಕಷ್ಟು ಆಸ್ತಿ-ಪಾಸ್ತಿಗಳನ್ನು ಮಾಡಿಕೊಂಡಿದ್ದಾರೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಈಗಲಾದರೂ ಮೇಲಧಿಕಾರಿಗಳು ಇವರ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಬಹುದು. ಸದ್ಯ ಡಿಸೆಂಬರ್ 8 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿಯೂ ಈ ಪ್ರಕರಣ ಸದ್ದು ಮಾಡುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ ಇನ್ನೂ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಇದೇ ರೀತಿಯ ಲೂಟಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon