ಬಯೋಮೆಟ್ರಿಕ್ ಹಾಜರಾತಿ; ಮಕ್ಕಳ ಆಧಾರ್ ನವೀಕರಣಕ್ಕೆ ಕಾಲಾವಕಾಶ ನೀಡಿದ ಸರ್ಕಾರ

WhatsApp
Telegram
Facebook
Twitter
LinkedIn

ಬೆಂಗಳೂರು: 5 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಅದಕ್ಕಾಗಿ ಆಧಾರ್ ನವೀಕರಣ ಮಾಡಿಸಿಕೊಳ್ಳಲು ಸೆ.30ರವರೆಗೆ ಕಾಲಾವಕಾಶ ನೀಡಲಾಗಿದೆ.

ರಾಜ್ಯದ ಎಲ್ಲಾ ಆಧಾರ್ ಸೇವಾ ಕೇಂದ್ರಗಳಲ್ಲಿ ಈ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗಿದ್ದು, ಪೋಷಕರು ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವ ಮೂಲಕ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.

ಆಧಾರ್ ಬಯೋಮೆಟ್ರಿಕ್ ನವೀಕರಣ ಮಾಡಿಸುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಸುಲಭವಾಗಿ ಪಡೆಯುವುದರ ಜತೆಗೆ, ಶಾಲಾ ದಾಖಲಾತಿಗೆ ಸಹಕಾರಿಯಾಗಲಿದೆ. ಪ್ರತಿ ಜಿಲ್ಲಾ ಮಟ್ಟದಲ್ಲೂ ಆಧಾರ್ ಬಯೋಮೆಟ್ರಿಕ್ ನವೀಕರಣ ಮತ್ತು ಹಾಜರಾತಿ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ ನೀಡಲಾಗಿದ್ದು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon