ಶಾಲಾ ಶಿಕ್ಷಕನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ: ಹೈಕೋರ್ಟ್

WhatsApp
Telegram
Facebook
Twitter
LinkedIn

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ಅದೇ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ಅತ್ಯಾಚಾರ, ಬೆದರಿಕೆ ಮತ್ತು ಇತರ ಅಪರಾಧಗಳನ್ನು ಎಸಗಿದ ಆರೋಪದ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿದಾರರು ಆಕೆಯನ್ನು ಕಚೇರಿ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಆಕೆಯನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು. ಆರೋಪಿ ಆಕೆಯ ನಗ್ನ ಫೋಟೋಗಳನ್ನು ಸಹ ಕ್ಲಿಕ್ಕಿಸಿದ್ದರು. ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು. ಆಕೆಯನ್ನು ಹಲವಾರು ಸ್ಥಳಗಳಿಗೆ ಕರೆಸಿಕೊಂಡು ಸಾಕಷ್ಟು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಇವೆಲ್ಲವೂ ಅಸಹನೀಯವಾದ ನಂತರ ಸಂತ್ರಸ್ತೆ ದೂರು ದಾಖಲಿಸಿದ್ದರು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಿದ್ದರು.

ಅರ್ಜಿದಾರರು ಆಕೆಯನ್ನು ಕಚೇರಿ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಆಕೆಯನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು. ಆರೋಪಿ ಸಂತ್ರಸ್ತೆಯ ನಗ್ನ ಫೋಟೋಗಳನ್ನು ಸಹ ಕ್ಲಿಕ್ಕಿಸಿದ್ದರು. ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು. ಆಕೆಯನ್ನು ಹಲವಾರು ಸ್ಥಳಗಳಿಗೆ ಕರೆಸಿಕೊಂಡು ಸಾಕಷ್ಟು ಬಾರಿ ಲೈಂಗಿಕ ಸಂಪರ್ಕ ನಡೆಸಿದ್ದರು. ಇವೆಲ್ಲವೂ ಅಸಹನೀಯವಾದ ನಂತರ ಸಂತ್ರಸ್ತೆ ದೂರು ದಾಖಲಿಸಿದ್ದರು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಿದ್ದರು.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಸೆಕ್ಷನ್ 376(2)(b) ಅಡಿಯಲ್ಲಿ ಸರಕಾರಿ ನೌಕರ ತನ್ನ ಅಧೀನದಲ್ಲಿ ಕೆಲಸ ನಿರ್ವಹಿಸುವ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದರೆ ಅದು ಶಿಕ್ಷಾರ್ಹ ಎಂದು ಪರಿಗಣಿಸಲಾಗಿದೆ. ಅರ್ಜಿದಾರರು ಸರ್ಕಾರಿ ಶಿಕ್ಷಕರಾಗಿರುವುದರಿಂದ ಮತ್ತು ದೂರುದಾರರು ಅವರ ಆಡಳಿತಾತ್ಮಕ ಪ್ರಭಾವದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ, ಪ್ರಾಥಮಿಕವಾಗಿ ಆರೋಪಗಳನ್ನು ಈ ನಿಬಂಧನೆಯ ವ್ಯಾಪ್ತಿಗೆ ತಂದಿರುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅತಿಥಿ ಶಿಕ್ಷಕಿಯ ನಗ್ನ ಛಾಯಾಚಿತ್ರಗಳನ್ನು ತಗೆದು ಬೆದರಿಕೆ ಹಾಕಿರುವ ಆರೋಪಿಯು ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಂತದಲ್ಲಿ ನ್ಯಾಯಾಲಯ ರಕ್ಷಣೆ ನೀಡುವುದರಿಂದ ಆರೋಪಗಳ ಗಂಭೀರತೆಯನ್ನು ಕಡಿಮೆ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿಗಳು ಅರ್ಜಿದಾರರ ಮನವಿಯನ್ನು ಈ ಹಂತದಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon