ಬೆಂಗಳೂರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ವತಿಯಿಂದ ಹಣಕಾಸು ಅಧಿಕಾರಿ ಮತ್ತು ಜಿಲ್ಲಾ ಪ್ರಮುಖ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಅಥವಾ ವಿಜಯನಗರದಲ್ಲಿ ಕೆಲಸ ಮಾಡಲು ಬಯಸುವ ಪದವೀಧರರು ಅಥವಾ ಸ್ನಾತಕೋತ್ತರ ಪದವೀಧರರು ಮಾರ್ಚ್ 22 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕಿದೆ.ಆಸಕ್ತರು ಮಾರ್ಚ್ 22 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಿದೆ.
ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿದ ನಂತರ ಅರ್ಜಿ ಶುಲ್ಕವನ್ನು ಪಾವತಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಅರ್ಜಿ ಸಲ್ಲಿಕೆಯಾದ ನಂತರ ಮೂಡುವ ಸಂಖ್ಯೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಿದೆ.















